ಕಾರಿನಲ್ಲಿ ಮರಾಕಾಯುಧಗಳೊಂದಿಗೆ ಸಂಚಾರ: ಕೊಲೆ, ದರೋಡೆಗೆ ಸಂಚು: ಸುರತ್ಕಲ್ ಫಾಝಿಲ್ ಹತ್ಯೆ ಆರೋಪಿ ಸಹಿತ 6 ಮಂದಿಯ ಬಂಧನ.

ಮಂಗಳೂರು: ಕಾರಿನಲ್ಲಿ ಮಾರಕಾಯುಧಗಳೊಂದಿಗೆ ಸಂಚರಿಸುತ್ತಿದ್ದ ಆರು ಮಂದಿಯನ್ನು ಕಾಪು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಶನಿವಾರ ಸಂಜೆ ವೇಳೆ ಕಾಪು ಸಮೀಪದ ಕೋತಲಕಟ್ಟೆ ಎಂಬಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ.

ಮುಲ್ಕಿಯ ಅಮಿತ್ ರಾಜ್, ಕಾಟಿಪಳ್ಳದ ಪ್ರಕಾಶ್, ವಾಮಂಜೂರು ನೀರುಮಾರ್ಗದ ವರುಣ್, ಸುರತ್ಕಲ್ ನ ಕಾರ್ತಿಕ್ ಶೆಟ್ಟಿ, ಕಾಟಿಪಳ್ಳದ ಅಭಿಷೇಕ್, ಫರಂಗಿಪೇಟೆಯ ಶ್ರೀಕಾಂತ್ ಶ್ರೀಪತಿ ಬಂಧಿತರು. ಬಂಧಿತರಿಂದ ಕಾರು, ಮಾರಕಾಯುಧಗಳು ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಉದ್ಯಾವರದ ಬಳಿ ಕಾರಿನಲ್ಲಿ ಮಾರಕಾಸ್ತ್ರಗಳೊಂದಿಗೆ ಮಾರಕಾಸ್ತ್ರಗಳೊಂದಿಗೆ ಇವರು ಹೋಗುತ್ತಿದ್ದ ಬಗ್ಗೆ ಅನುಮಾನಗೊಂಡ ಕಾಪು ಪೊಲೀಸ್ ವೃತ್ತ ನಿರೀಕ್ಷಕಿ ಜಯಶ್ರೀ ಮಾನೆ ಕಾರನ್ನು ನಿಲ್ಲಿಸುವಂತೆ ಸೂಚಿಸಿದರೂ ಕಾರನ್ನು ನಿಲ್ಲಿಸದೆ ಕಾಪು ಕಡೆ ಪರಾರಿಯಾಗಿದ್ದಾರೆ. ಬಳಿಕ ಈ ಬಗ್ಗೆ ಕಾಪು ಠಾಣೆಗೆ ಮಾಹಿತಿ ನೀಡಿದ ಜಯಶ್ರೀ ಮಾನೆ ಆರೋಪಿಗಳ ವಾಹನವನ್ನು ಬೆನ್ನಟ್ಟಿದ್ದಾರೆ

ಇನ್ನೊಂದು ವಾಹನದಲ್ಲಿ ಕಾಪು ಠಾಣೆಯ ಎಸ್ ಐ ಅಬ್ದುಲ್ ಆರೋಪಿಗಳ ವಾಹನವನ್ನು ಬೆನ್ನಟ್ಟಿದ್ದಾರೆ. ಕೊನೆಗೆ ಕಾಪುವಿನ ಕೋತಲ್ ಕಟ್ಟೆ ಬಳಿ ಆರೋಪಿಗಳ ವಾಹನವನ್ನು ತಡೆದು ನಿಲ್ಲಿಸಿದ್ದಾರೆ‌. ವಾಹನವನ್ನು ತಪಾಸಣೆ ಮಾಡಿದ ಪೊಲೀಸರಿಗೆ ಅದರೊಳಗೆ ಮಾರಕಾಯುಧಗಳು ಹಾಗೂ ಇತರ ವಸ್ತುಗಳು ಸಿಕ್ಕಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?