ಒಂದು ಮತ ಹೆಚ್ಚಿಗೆ ಸಿಕ್ಕಿದ್ರು ರಾಜೀನಾಮೆ ನೀಡುತ್ತೇನೆ ಎಂದಿದ್ದ ಪ್ರದೀಪ್ ಈಶ್ವರ್ ಮನೆಗೆ ಕಲ್ಲು ತೂರಾಟ

ಚಿಕ್ಕಬಳ್ಳಾಪುರ: ಲೋಕಸಭಾ ಚುನಾವಣಾ ಫಲಿತಾಂಶ ನಿನ್ನೆ ಹೊರಬಿದ್ದದ್ದು ಬಿಜೆಪಿ ನೇತೃತ್ವದ ಎನ್ಡಿಎಗೆ ಬಹುಮತ ಸಿಕ್ಕಿದೆ. ಮೈತ್ರಿಪಕ್ಷಗಳ ಸಹಕಾರದಿಂದ 3ನೇ ಬಾರಿ ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆ ಮಾಡಬಹುದಾಗಿದೆ. ರಾಜ್ಯದಲ್ಲಿ ಬಿಜೆಪಿ 17 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ
ರಾಜ್ಯ ಚುನಾವಣೆಯಲ್ಲಿ ಪ್ರದೀಪ್ ಈಶ್ವರ್ ವಿರುದ್ಧ ಸುಧಾಕರ್ ಸೋತಿದ್ದರು. ಆದರೆ ಕರ್ನಾಟಕದ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಲೋಕಸಭಾ ಚುನಾವಣೆಯಲ್ಲಿ ಗೆಲುವು ದಾಖಲಿಸಿದ್ದಾರೆ. ಇದರ ಬೆನ್ನಲ್ಲೇ ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯಗಳು ಕೇಳಿಬರುತ್ತಿವೆ.

ಚುನಾವಣೆಗೂ ಮುನ್ನ ಚಿಕ್ಕಾಬಳ್ಳಾಪುರದಲ್ಲಿ ಸುಧಾಕರ್ ಅವರು ಒಂದೇ ಒಂದು ಮತ ಹೆಚ್ಚಿಗೆ ಪಡೆದರು ನಾನು ರಾಜೀನಾಮೆ ನೀಡುತ್ತೇನೆ ಎಂದು ಪ್ರದೀಪ್ ಈಶ್ವರ್ ಹೇಳಿದ್ದರು. ಅಲ್ಲದೆ, ಸುಧಾಕರ್ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದೀಗ ಸುಧಾಕರ್ ಅವರು ಗೆಲುವು ದಾಖಲಿಸಿದ್ದು, ಪ್ರದೀಪ್ ಈಶ್ವರ್ ರಾಜೀನಾಮೆಗೆ ಸಾಕಷ್ಟು ಮಂದಿ ಒತ್ತಾಯಿಸುತ್ತಿದ್ದಾರೆ.

ಚಿಕ್ಕಬಳ್ಳಾಪುರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ಮನೆ ಮೇಲೆ ಕಿಡಿಗೆಡಿಗಳು ಕಲ್ಲು ತೂರಾಟ ನಡೆಸಿದ್ದಾರೆ. ಇದರ ಪರಿಣಾಮ ಮನೆಯ ಕಿಟಕಿ, ಗಾಜು ಪುಡಿ ಪುಡಿಯಾಗಿದೆ. ಸುಧಾಕರ್ ಅವರು ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಲ್ಲು ತೂರಾಟ ನಡೆಸಿರುವ ಶಂಕೆ ವ್ಯಕ್ತವಾಗುತ್ತಿದೆ.

ಚಿಕ್ಕಬಳ್ಳಾಪುರ ನಗರ ಪೊಲೀಸರು ಘಟನೆಯ ಬೆನ್ನಲ್ಲೇ ಶಾಸಕರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಪ್ರದೀಪ್ ಈಶ್ವರ್ ಮನೆಯ ಸುತ್ತಮುತ್ತಲಿನ ಸಿಸಿಟಿವಿ ಕ್ಯಾಮೆರಾಗಳನ್ನು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ

News Editor

Learn More →

Leave a Reply

Your email address will not be published. Required fields are marked *