ಬಿಜೆಪಿಗೆ ಮತ್ತೊಂದು ಗುಡ್‌ನ್ಯೂಸ್ ನೀಡಿದ ಆ 10 ಜನ ಯಾರು?

ನೂತನ ಸರ್ಕಾರ ರಚನೆ ಹಂತದಲ್ಲಿರುವ ಮೋದಿ  ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಮತ್ತೊಂದು ಶುಭಸುದ್ಧಿ ಸಿಕ್ಕಿದ್ದು, ಸ್ವತಂತ್ರವಾಗಿ ಗೆದ್ದ 10 ಅಭ್ಯರ್ಥಿಗಳು ಬಿಜೆಪಿಗೆ ಬೇಷರತ್ ಬೆಂಬಲ ನೀಡುವುದಾಗಿ ಘೋಷಿಸಿದ್ದಾರೆ.

ಸ್ವತಂತ್ರವಾಗಿ ಗೆದ್ದ 10 ಅಭ್ಯರ್ಥಿಗಳ ಜೊತೆಯಲ್ಲಿ ಸ್ವತಃ ಅಮಿತ್ ಶಾ ಚರ್ಚೆ ನಡೆಸಿದ್ದು, 10 ಮಂದಿ ಬೆಂಬಲಿಸುವುದಾಗಿ ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಆದರೆ ಆ 10 ಮಂದಿಯ ಹೆಸರು ಹಾಗೂ ವಿವರ ಬಹಿರಂಗಗೊಂಡಿಲ್ಲ. ಸುಭದ್ರ ಸರ್ಕಾರವನ್ನು ರಚಿಸುವ ಉದ್ದೇಶದಿಂದ ಅಮಿತ್ ಶಾ ಸಂಪೂರ್ಣ ಜವಾಬ್ಧಾರಿ ವಹಿಸಿಕೊಂಡಿದ್ದು, ಬಿಜೆಪಿ ಹೊರತಾಗಿ ಎಲ್ಲಾ ಮೈತ್ರಿ ಪಕ್ಷದ ನಾಯಕರೊಂದಿಗೆ ಸ್ವತಃ ಅವರೇ ಮಾತನಾಡುತ್ತಿದ್ದು, ರಾಷ್ಟ್ರಪತಿಗಳಿಗೆ ಬೆಂಬಲ ಪತ್ರ ಸಲ್ಲಿಸುವವರೆಗೂ ಬಹಳಷ್ಟು ಹೆಸರುಗಳನ್ನು ಗೌಪ್ಯವಾಗಿಡಲು ನಿರ್ಧರಿಸಿದ್ದಾರೆಂದು ತಿಳಿದುಬಂದಿದೆ.

ದೇಶಕ್ಕೆ ಸುಭದ್ರ ಸರ್ಕಾರ ಕೊಡುವ ಉದ್ದೇಶದಿಂದ ಎನ್‌ಡಿಎ ನಾಯಕರು ಈ ನಿರ್ಧಾರಕ್ಕೆ ಬಂದಿದ್ದಾರೆ. ಇನ್ನು ಕೆಲವೇ ಗಂಟೆಗಳಲ್ಲಿ ಎನ್‌ಡಿಎ ನಾಯಕರು ಮೋದಿ ನೇತೃದಲ್ಲಿ ರಾಷ್ಟ್ರಪತಿ ಭವನಕ್ಕೆ ತೆರಳಿ ಸರ್ಕಾರ ರಚನೆ ಹಕ್ಕು ಮಂಡನೆ ಹಾಗೂ ಬೆಂಬಲ ಪತ್ರ ಸಲ್ಲಿಸಲಿದ್ದಾರೆ ಎಂದು ವರದಿಯಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!