ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಿ.ನಾಗೇಂದ್ರ?

ಬೆಂಗಳೂರು : ವಾಲ್ಮೀಕಿ ಆಭಿವೃದ್ದಿ ನಿಗಮದಲ್ಲಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಎದುರಿಸುತ್ತಿರುವ ಬಿ.ನಾಗೇಂದ್ರ ಅವರು ಸಿಎಂ ನಿವಾಸಕ್ಕೆ ತೆರಳಿ, ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ.


ಸಚಿವರ ರಾಜೀನಾಮೆಗೆ ಆಗ್ರಹಿಸಿ ಇಂದು ಬಿಜೆಪಿ ನಾಯಕರು ರಾಜಭವನ ಚಲೋ ನಡೆಸಿದ್ದರು. ಅಲ್ಲದೆ, ಪ್ರತಿಪಕ್ಷದ ನಾಯಕ ಆರ್.ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನೇತೃತ್ವದಲ್ಲಿ ಶಾಸಕರುಗಳಾದ ಕೆ.ಗೋಪಾಲಯ್ಯ , ಅಶ್ವಥ್ ನಾರಾಯಣ, ಬೈರತಿ ಬಸವರಾಜ್ , ರವಿಕುಮಾರ್ ಸೇರಿದಂತೆ ಪ್ರಮುಖ ಮುಖಂಡರ ನಿಯೋಗವು ವಿಧಾನಸೌಧದಿಂದ ರಾಜಭವನಕ್ಕೆ ತೆರಳಿ ರಾಜ್ಯಪಾಲರಿಗೆ ದೂರು ಸಲ್ಲಿಸಿ ಅಕ್ರಮ ಸಂಬಂಧ ಮಧ್ಯಪ್ರವೇಶಕ್ಕೆ ಒತ್ತಾಯಿಸಿದ್ದರು.

News Editor

Learn More →

Leave a Reply

Your email address will not be published. Required fields are marked *