ಉಡುಪಿ: ಮಲ್ಪೆ ಬೀಚ್ ಪ್ರವೇಶ ನಿಷೇಧ.

ಮಳೆಗಾಲದ ಸಮಯದಲ್ಲಿ ಕರಾವಳಿ ಜಿಲ್ಲೆಗಳಿಗೆ ಅಧಿಕ ಸಂಖ್ಯೆಯಲ್ಲಿ ಪ್ರವಾಸಿಗರು ಭೇಟಿ ನೀಡುತ್ತಾರೆ. ಇಲ್ಲಿನ ವಾತಾವರಣ ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತದೆ. ಮಳೆಗಾಲದಲ್ಲಿ ಮಳೆ-ಗಾಳಿಗೆ ಸಮುದ್ರಗಳ ಅಬ್ಬರ ಜೋರಾಗಿರುತ್ತದೆ. ಕಡಲು ತೀರ ಉಡುಪಿಜಿಲ್ಲೆಯಲ್ಲಿ ಬಿಟ್ಟು, ಬಿಡದೆ ವರುಣ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಜಿಲೆಯ ಪ್ರಸಿದ್ಧ ಪ್ರವಾಸಿ ತಾಣವಾದ ಮಲ್ಪೆ ಬೀಚ್​ಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ.

ಮಲ್ಪೆ ಬೀಚ್​ಗೆ ಬೇಲಿ ಹಾಕಿ, ಬೀಚ್ ಪ್ರವೇಶಕ್ಕೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ಪ್ರವಾಸಿಗರ ಸುರಕ್ಷತೆಯ ದೃಷ್ಟಿಯಿಂದ ಜಿಲ್ಲಾಡಳಿತ ಮತ್ತು ಸುರಕ್ಷತೆಯ ದೃಷ್ಟಿಯಿಂದ ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಅನೇಕ ಕ್ರಮಗಳನ್ನು ಕೈಗೊಂಡಿದೆ.

ಸುಮಾರು ಒಂದು ಕಿಲೋಮೀಟರ್ ಉದ್ದಕ್ಕೆ ಏಳು ಅಡಿ ಎತ್ತರದ ಬಲೆ ಅಳವಡಿಸಿ ತಡೆ ಬೇಲಿಯನ್ನು ಸದ್ಯಕ್ಕೆ ನಿರ್ಮಿಸಲಾಗಿದೆ. ಜೊತೆಗೆ ಎಚ್ಚರಿಕೆಯ ಕೆಂಪು ಬಾವುಟ ಹಾಕಲಾಗಿದೆ. ಇದರ ಜೊತೆಗೆ ಆಯಕಟ್ಟಿನ ಜಾಗದಲ್ಲಿ ಬೀಚ್ ಪ್ರವೇಶ ನಿಷೇಧದ ಎಚ್ಚರಿಕೆ ಫಲಕಗಳನ್ನು ಕೂಡ ಅಳವಡಿಸಲಾಗಿದೆ. ಮಲ್ಪೆ ಬೀಚಿನಲ್ಲಿ ತರಬೇತಿ ಪಡೆದ ಜೀವ ರಕ್ಷಕರನ್ನ ನಿಯೋಜನೆ ಮಾಡಲಾಗಿದೆ. ನಿರಂತರವಾಗಿ ಎಟಿಬಿ ಸ್ಯಾಂಡ್ ಬೈಕ್ ಮೂಲಕ ಬೀಚ್​​ನ್ನು ಗಸ್ತು ತಿರುಗುವ ಜೀವ ರಕ್ಷಕ ಪಡೆಯ ಸದಸ್ಯರು ಬೀಚ್ ವೀಕ್ಷಣೆಗೆ ಬರುವ ಪ್ರವಾಸಿಗರಿಗೆ ಮುನ್ನೆಚ್ಚರಿಕೆಗಳನ್ನ ನೀಡುತ್ತಾ, ಅವರನ್ನು ರಕ್ಷಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಮುದ್ರ ಪ್ರಸಿದ್ಧಿ ಆಗಿರುವ ಹಿನ್ನೆಲೆಯಲ್ಲಿ ಪ್ರವಾಸಿಗರು ಈ ಬಲೆಯನ್ನು ದಾಟಿ ಹೋಗದಂತೆ ಕಟ್ಟುನಿಟ್ಟಿನ ಕ್ರಮವನ್ನು ತೆಗೆದುಕೊಳ್ಳಲಾಗಿದೆ.

ಮಳೆಗಾಲದ ಅರಿವೇ ಇಲ್ಲದ ಹೊರ ಜಿಲ್ಲೆ ಮತ್ತು ಹೊರರಾಜ್ಯದ ಪ್ರವಾಸಿಗರು ಮಲ್ಪೆ ಬೀಚ್​ಗೆ ಇನ್ನೂ ಕೂಡ ಭೇಟಿ ನೀಡುತ್ತಿದ್ದು ಬೀಚ್​ನ ನೀರಿನಲ್ಲಿ ಆಟವಾಡಲು ಅವಕಾಶ ಸಿಗದೆ ಇರುವ ಹಿನ್ನೆಲೆಯಲ್ಲಿ ಬೇಸರದಿಂದ ಹಿಂದಿರುಗುತ್ತಿದ್ದಾರೆ. ಇನ್ನು ಕೆಲವು ಪ್ರವಾಸಿಗರು ಬೀಚ್​ನ ಮರಳಿನ ಮೇಲೆ ಆಟವಾಡುತ್ತಾ, ವಿಡಿಯೋ ಚಿತ್ರಿಸಿಕೊಂಡು ಫೋಟೋ ಕ್ಲಿಕ್ಕಿಸಿಕೊಂಡು ತೆರುಳುತ್ತಿದ್ದಾರೆ.

ಉಡುಪಿ ಜಿಲ್ಲಾಡಳಿತ ಮತ್ತು ಮಲ್ಪೆ ಬೀಚ್ ಅಭಿವೃದ್ಧಿ ಸಮಿತಿ ಇಷ್ಟೆಲ್ಲ ಕ್ರಮ ಕೈಗೊಂಡಿದ್ದರೂ ಪ್ರವಾಸಿಗರು ಸುರಕ್ಷತಾ ಕ್ರಮಗಳನ್ನು ನಿರ್ಲಕ್ಷಿಸಿ ಭಾನುವಾರ ಪ್ರವಾಸಿಗರು ಸೀ ವಾಕ್ ವೇ ಬಳಿ ನೀರಿಗೆ ಇಳಿದಿದ್ದರು. ಈ ಕುರತಿಯ ಜೀವರಕ್ಷಕರು ಮಾತನಾಡಿ, ಪರಿಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನಿರ್ಬಂಧಗಳನ್ನು ಜಾರಿಗೊಳಿಸಲು ಮತ್ತು ಅಪಾಯಕಾರಿ ಮಾನ್ಸೂನ್ ಅವಧಿಯಲ್ಲಿ ಪ್ರವಾಸಿಗರು ನೀರಿಗೆ ಇಳಿಯುವುದನ್ನು ತಡೆಯಲು ಸ್ಥಳೀಯ ಪೊಲೀಸರ ಸಹಾಯ ಬೇಕು ಎಂದು ಮನವಿ ಮಾಡಿದ್ದಾರೆ.

ಜಿಲ್ಲಾಡಳಿತ ನೀಡಿದ ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ನಿರ್ಲಕ್ಷಿಸಿ ಗಣನೀಯ ಸಂಖ್ಯೆಯಲ್ಲಿ ಪ್ರವಾಸಿಗರು ಮಲ್ಪೆ ಬೀಚ್‌ಗೆ ಆಗಮಿಸಿದ್ದಾರೆ. ಹಲವಾರು ನಿರ್ಬಂಧಗಳು ಮತ್ತು ಸಲಹೆಗಳ ಹೊರತಾಗಿಯೂ, ಅನೇಕ ಪ್ರವಾಸಿಗರು ಜೀವರಕ್ಷಕರ ಎಚ್ಚರಿಕೆಗಳನ್ನು ನಿರ್ಲಕ್ಷಿಸಿ ಕಡಲತೀರದ ದಕ್ಷಿಣ ಭಾಗದಲ್ಲಿ ಸಮುದ್ರಕ್ಕೆ ಇಳಿದಿದ್ದಾರೆ ಎಂದು ಸ್ಥಳೀಯರು ಹೇಳಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!