ಪೋಕ್ಸೋ ಪ್ರಕರಣದಲ್ಲಿ ಬಿಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್​: ಬಂಧಿಸದಂತೆ ಹೈಕೋರ್ಟ್ ಆದೇಶ.

ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ವಿರುದ್ಧ ದಾಖಲಾದ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಕೇಸ್ ರದ್ದು ಕೋರಿ ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾ.ಕೃಷ್ಣ ಎಸ್​ ದೀಕ್ಷಿತ್​​​​​ರವರ ಏಕಸದಸ್ಯ ಪೀಠದಲ್ಲಿ ವಿಚಾರಣೆ ಮಾಡಿದ್ದು, ತನಿಖೆಗೆ ಹಾಜರಾಗುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಜೂ. 17ರಂದು ಹಾಜರಾಗುವುದಾಗಿ ಬಿ.ಎಸ್ ಯಡಿಯೂರಪ್ಪ ಪರ ವಕೀಲರು ಉತ್ತರಿಸಿದ್ದಾರೆ.

ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಯಡಿಯೂರಪ್ಪ ವಿರುದ್ಧ ಬೆಂಗಳೂರಿನ ಸದಾಶಿವನಗರ ಠಾಣೆಯಲ್ಲಿ ಪೋಕ್ಸೋ ಕೇಸ್ ದಾಖಲಾಗಿತ್ತು. ಈ ವಿಚಾರವಾಗಿ ಯಡಿಯೂರಪ್ಪಗೆ ಪೊಲೀಸರು ನೋಟಿಸ್ ನೀಡಿ ತನಿಖೆಗೆ ಹಾಜರಾಗುವಂತೆ ಸೂಚಿಸಿದ್ದರು. ಆದರೆ ಯಡಿಯೂರಪ್ಪ ವಿಚಾರಣೆಗೆ ಹಾಜರಾಗಿರಲಿಲ್ಲ. ನಂತರ ತಮ್ಮ ವಿರುದ್ಧದ ಕೇಸ್ ರದ್ದು ಮಾಡುವಂತೆ ಹೈಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ಹಾಗೂ ಬಂಧನ ಭೀತಿಯಿಂದ ನಿರೀಕ್ಷಣಾ ಜಾಮೀನಿಗೆ ಕೂಡ ಅವರು ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್‌ ಮಹತ್ವದ ಆದೇಶ ಹೊರಡಿಸಿದ್ದು, ಅದರಂತೆ ಜೂನ್‌ 17ರಂದು ಸಿಐಡಿ ಅಧಿಕಾರಿಗಳ ಎದುರು ವಿಚಾರಣೆಗೆ ಹಾಜರಾಗಬೇಕು ಎಂದು ಯಡಿಯೂರಪ್ಪ ಅವರಿಗೆ ಕೋರ್ಟ್‌ ಸೂಚಿಸಿದೆ. ವಿಚಾರಣೆಯನ್ನು ಎರಡು ವಾರ ಮುಂದೂಡಲಾಗಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?