ಪೆಟ್ರೋಲ್ ಹಾಗೂ ಡಿಸೇಲ್ ದರ ಏರಿಕೆ .

ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಸರ್ಕಾರ ವಾಹನ ಸವಾರರ ಜೇಬಿಗೆ ಕತ್ತರಿ ಪ್ರಯೋಗ ಮಾಡಿದ್ದು, ಪೆಟ್ರೋಲ್‌ ಮತ್ತು ಡೀಸೆಲ್‌ ಮಾರಾಟದ ಮೇಲಿನ ತೆರಿಗೆಯನ್ನು ಹೆಚ್ಚಳ ಮಾಡಿದೆ. ಶನಿವಾರದಿಂದಲೇ ಅನ್ವಯವಾಗುವಂತೆ ರಾಜ್ಯಾಧ್ಯಂತ ಪ್ರತಿ ಲೀಟರ್‌ ಪ್ರೆಟೋಲ್‌ ದರವನ್ನು 3 ರೂ.ಹೆಚ್ಚಿಸಿದೆ.ಇದರೊಂದಿಗೆ, ಸುದೀರ್ಘ ಸಮಯದ ನಂತರ ರಾಜ್ಯದಲ್ಲಿ ಪೆಟ್ರೋಲ್, ಡೀಸೆಲ್ ದುಬಾರಿಯಾಗುತ್ತಿದೆ.

ಈ ಹಿಂದೆ ಪೆಟ್ರೋಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಶೇ 25.92 ರಷ್ಟಿತ್ತು. ಈಗ ಶೇ 3.9ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 29.84 ಕ್ಕೆ ಏರಿಕೆಯಾಗಿದೆ. ಡಿಸೇಲ್ ಮೇಲಿನ ಚಿಲ್ಲರೆ ಮಾರಾಟ ತೆರಿಗೆ ಈ‌ ಹಿಂದೆ ಶೇ 14.34 ರಷ್ಟಿತ್ತು. ಈಗ ಶೇ 4.1 ರಷ್ಟು ಹೆಚ್ಚಳ ಮಾಡಲಾಗಿದ್ದು, ಶೇ 18.44 ಕ್ಕೆ ಏರಿಕೆಯಾಗಿದೆ. ಪರಿಣಾಮವಾಗಿ ರಾಜ್ಯದಲ್ಲಿ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡಿಸೇಲ್ ದರ 3.50 ರೂಪಾಯಿ ಹೆಚ್ಚಳವಾಗಲಿದೆ.
ವಿರೋಧ ಪಕ್ಷಗಳು ಇದನ್ನೇ ಅಸ್ತ್ರ ಮಾಡಿಕೊಂಡರೆ ಫಲಿತಾಂಶದಲ್ಲಿ ಹಿನ್ನಡೆಯಾಗಬಹುದೆಂಬ ಕಾರಣಕ್ಕೆ ಸರ್ಕಾರ ದರ ಹೆಚ್ಚಿಸುವ ದುಸ್ಸಾಹಸಕ್ಕೆ ಮುಂದಾಗಿರಲಿಲ್ಲ. ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ದರ ಹೆಚ್ಚಿಸುವ ಮೂಲಕ ವಾಹನ ಸವಾರರ ಜೇಬಿಗೆ ಕತ್ತರಿ ಬಿದ್ದಂತಾಗಿದೆ. ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಬೇಕಾದ ಅಗತ್ಯ ಇರುವ ಕಾರಣ ಸರ್ಕಾರ ಈ ಕ್ರಮಕ್ಕೆ ಮುಂದಾಗಿದೆ ಎಂದು ತಿಳಿದುಂದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?