ಪುತ್ತೂರಿನ ಹೊಟೇಲ್ ಸಪ್ಲೈ ನಾಪತ್ತೆ : ನಗರ ಠಾಣೆಯಲ್ಲಿ ಪ್ರಕರಣ ದಾಖಲು.

ಪುತ್ತೂರಿನ ಹೊಟೇಲ್ ಸಪ್ಲೈ ನಾಪತ್ತೆ : ನಗರ ಠಾಣೆಯಲ್ಲಿ ಪ್ರಕರಣ ದಾಖಲು.

ಪುತ್ತೂರು: ಇಲ್ಲಿಯ ಹೊಟೇಲ್ ವೊಂದರ ಸಪ್ಲಾಯರ್ ನಾಪತ್ತೆಯಾದ ಕುರಿತು ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆತನ ಪತ್ನಿ ಪುತ್ತೂರು ನಗರ ಪೊಲಿಸ್ ಠಾಣೆಗೆ ದೂರು ನೀಡಿದ್ದಾರೆ.
ನೆಲ್ಲಿಕಟ್ಟೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡಿಕೊಂಡಿರುವ ಬೊಳುವಾರಿನ ಹೊಟೇಲ್ ಒಂದರಲ್ಲಿ ಸಪ್ಲಾಯರ್ ಆಗಿದ್ದ ಕೆಲಸ ಮಾಡುತ್ತಿದ್ದ ಶಿವಪ್ಪ ಯಾನೆ ಶಿವಣ್ಣ (45) ನಾಪತ್ತೆಯಾದವರು.
ಪತ್ನಿ ಗೀತಾ ಎಂಬವರು ಪುತ್ತೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ನನ್ನ ಗಂಡ ಶಿವಪ್ಪ ಯಾನೆ ಶಿವಣ್ಣ ಅವರು ಬೊಳುವಾರಿನ ಹೊಟೇಲ್‌ನಲ್ಲಿ ಸಪ್ಲೇಯರ್ ಆಗಿ ಕೆಲಸ ಮಾಡುತ್ತಿದ್ದು, ಇತ್ತೀಚೆಗೆ ಮೂರು ತಿಂಗಳಿನಿಂದ ಕೆಲಸಕ್ಕೆ ಹೋಗದೆ ಮನೆಯಲ್ಲೇ ಇರುತ್ತಿದ್ದರು. ಜೂ.10ರಂದು ಬೆಳಿಗ್ಗೆ ಅವರು ಪೇಟೆಗೆ ಹೋಗಿ ಬರುವುದಾಗಿ ತಿಳಿಸಿ ಮನೆಯಿಂದ ಹೋದವರು ಹಿಂದಿರುಗಿಲ್ಲ. ಆದರೆ ಈ ಹಿಂದೆಯೂ ಅದೇ ರೀತಿ ಮನೆಯಿಂದ ಹೋದವರು ವಾರ ಕಳೆದು ಬಂದಿದ್ದರು. ಹಾಗಾಗಿ ಅದೇ ರೀತಿ ಅವರು ಹಿಂದಿರುಗಿ ಬರಬಹುದು ಎಂದು ತಿಳಿದುಕೊಂಡಿದ್ದೆ. ಆದರೆ ಈ ಬಾರಿ ಅವರು ಮನೆಯಿಂದ ಹೋಗಿ 10 ದಿನ ಆದರೂ ಬಂದಿಲ್ಲ ಎಂದು ದೂರಿನಲ್ಲಿ ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?