ರಾಜ್ಯ ಸರಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ತಾ।ಸರಕಾರಿ ನೌಕರರ ಸಂಘದಿಂದ ಪುತ್ತೂರು ಶಾಸಕರಿಗೆ ಮತ್ತು ತಹಶೀಲ್ದಾರಿಗೆ ಮನವಿ.

ರಾಜ್ಯ ಸರಕಾರಿ ನೌಕರರ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರು ತಾ।ಸರಕಾರಿ ನೌಕರರ ಸಂಘದಿಂದ ಪುತ್ತೂರು ಶಾಸಕರಿಗೆ ಮತ್ತು ತಹಶೀಲ್ದಾರಿಗೆ ಮನವಿ.

ಪುತ್ತೂರು:ರಾಜ್ಯ ಸರಕಾರಿ ನೌಕರರ 7ನೇ ವೇತನ ಆಯೋಗದ ಅನುಷ್ಠಾನ, ಎನ್.ಪಿ.ಎಸ್ ರದ್ದುಗೊಳಿಸಿ ಹಳೆ ಪಿಂಚಣಿ ಯೋಜನೆ ಮರು ಜಾರಿ, ಆರೋಗ್ಯ ಸಂಜೀವಿನಿ ಯೋಜನೆಯನ್ನು ಅನುಷ್ಠಾನಗೊಳಿಸುವಂತೆ ಸರಕಾರದ ಗಮನ ಸೆಳೆಯಲು ರಾಜ್ಯ ಸರಕಾರಿ ನೌಕರರ ಸಂಘದ ನಿರ್ದೇಶನದಂತೆ ಸರಕಾರದ ಗಮನ ಸೆಳೆಯಲು ಪುತ್ತೂರು ತಾಲೂಕು ಸರಕಾರಿ ನೌಕರರ ಸಂಘದಿಂದ ಅಧ್ಯಕ್ಷ ಶಿವಾನಂದ ಆಚಾರ್ಯರವರ ನೇತೃತ್ವದಲ್ಲಿ ಶಾಸಕರಾದ ಅಶೋಕ್‌ ಕುಮಾ‌ರ್ ರೈಯವರಿಗೆ ಶಾಸಕರ ಕಛೇರಿಯಲ್ಲಿ ಜು.8 ರಂದು ಮನವಿ ನೀಡಲಾಯಿತು.

ಈ ಹಿಂದಿನ 6ನೇ ವೇತನ ಆಯೋಗವು 2017, ಜುಲೈ ಒಂದರಂದು ರಚನೆಯಾಗಿ 2018, ಜನವರಿ 31ರಂದು ವರದಿ ಸಲ್ಲಿಸಿ ಸರ್ಕಾರವು 2018, ಮಾರ್ಚ್ ಒಂದರAದು ಸರ್ಕಾರಿ ಆದೇಶ ಹೊರಡಿಸಿ ಕೇವಲ 9 ತಿಂಗಳಲ್ಲೇ 6ನೇ ವೇತನ ಆಯೋಗ ಜಾರಿಗೊಳಿಸಲಾಗಿತ್ತು. ಸಂಪ್ರದಾಯದಂತೆ ರಾಜ್ಯ 6ನೇ ವೇತನ ಆಯೋಗದ ವರದಿಯು ಅನುಷ್ಟಾನಗೊಂಡು 2022, ಜೂನ್ 31ಕ್ಕೆ 5 ವರ್ಷ ಪೂರ್ಣಗೊಂಡಿರುವುದರಿಂದ ರಾಜ್ಯ ಸರ್ಕಾರಿ ನೌಕರರ ವೇತನ ಮತ್ತು ಭತ್ಯೆಗಳನ್ನು 2022, ಜುಲೈ ಒಂದರಿಂದ ಪರಿಷ್ಕರಣೆಗೊಳಿಸಬೇಕಾಗಿತ್ತು. ಸಂಘದ ಒತ್ತಡದ ಹಿನ್ನೆಲೆಯಲ್ಲಿ ಈ ಹಿಂದಿನ ಸರ್ಕಾರವು 2022, ನವೆಂಬರ್ 19 ರಂದು ನಿವೃತ್ತ ಮುಖ್ಯ ಕಾರ್ಯದರ್ಶಿಗಳಾದ ಕೆ.ಸುಧಾಕರ್ ರಾವ್‌ರವರ ಅಧ್ಯಕ್ಷತೆಯಲ್ಲಿ ರಾಜ್ಯ 7ನೇ ವೇತನ ಆಯೋಗವನ್ನು ರಚಿಸಿ, ಆರು ತಿಂಗಳೊಳಗೆ ಸರ್ಕಾರಕ್ಕೆ ವರದಿ ಸಲ್ಲಿಸಲು ಆದೇಶಿಸಿತ್ತು. ಕರ್ನಾಟಕ ಸರ್ಕಾರವು ರಾಜ್ಯ 7ನೇ ವೇತನ ಆಯೋಗಕ್ಕೆ ನಿಗದಿಪಡಿಸಿದ್ದ ಆರು ತಿಂಗಳ ಅವಧಿಯೊಳಗೆ ವರದಿಯನ್ನು ಪಡೆಯದೇ 2023, ಮೇ 19ರಿಂದ 6 ತಿಂಗಳು ಮತ್ತು 2023, ನವೆಂಬರ್ 6ರಿಂದ 6 ತಿಂಗಳು ಸೇರಿದಂತೆ ಎರಡು ಭಾರಿ ಅವಧಿಯನ್ನು ವಿಸ್ತರಿಸಿರುತ್ತದೆ. ತದನಂತರ ವೇತನ ಆಯೋಗವು 2024, ಮಾರ್ಚ್ ತಿಂಗಳಲ್ಲಿ ಸರ್ಕಾರಕ್ಕೆ ವರದಿಯನ್ನು ಸಲ್ಲಿಸಿದ್ದು, ವೇತನ ಆಯೋಗ ರಚನೆಯಾಗಿ ಈಗಾಗಲೇ 19 ತಿಂಗಳು ಕಳೆದಿರುತ್ತದೆ. ವೇತನ ಆಯೋಗದ ಮುಂದೆ ಸಂಘವು ರಾಜ್ಯ ಸರ್ಕಾರಿ ನೌಕರರ ವೇತನ- ಭತ್ಯೆಗಳ ಸಂಬಂಧ ಸಮಗ್ರ ವರದಿಯನ್ನು ಸಿದ್ಧಪಡಿಸಿ ಶೇ.40% ಫಿಟ್‌ಮೆಂಟ್ ಸೌಲಭ್ಯ ನೀಡಲು ಮನವಿಯನ್ನು ಸಲ್ಲಿಸಲಾಗಿತ್ತು. ಈ ಮಧ್ಯೆ ಸಂಘವು 2023, ಮಾರ್ಚ್ ತಿಂಗಳಲ್ಲಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡ ಪರಿಣಾಮ ಸರ್ಕಾರವು 2023, ಏಪ್ರಿಲ್ ತಿಂಗಳಿಗೆ ಅನ್ವಯವಾಗುವಂತೆ ಶೇ.17% ಮಧ್ಯಂತರ ಪರಿಹಾರವನ್ನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.

\

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ರಾಜ್ಯದ 31 ಕಂದಾಯ ಜಿಲ್ಲೆ, 3 ಶೈಕ್ಷಣಿಕ ಜಿಲ್ಲೆ ಹಾಗೂ 183 ತಾಲೂಕುಗಳಲ್ಲಿ ಸಂಘದ ಶಾಖೆಗಳನ್ನು ಹೊಂದಿದ್ದು, 6 ಲಕ್ಷ ರಾಜ್ಯ ಸರ್ಕಾರಿ ನೌಕರರನ್ನು ಪ್ರತಿನಿಧಿಸುವ ಏಕೈಕ ಬೃಹತ್ ಸಂಘಟನೆಯಾಗಿರುತ್ತದೆ. ಸಂಘವು ರಾಷ್ಟ್ರ ಹಾಗೂ ರಾಜ್ಯ ಸಂಭವಿಸುವ ಪ್ರಕೃತಿ ವಿಕೋಪ, ಉತ್ತರ ಕರ್ನಾಟಕದ ಪ್ರವಾಹ, ಕೋವಿಡ್ ಸಂಕಷ್ಟದಲ್ಲಿ ಸರ್ಕಾರಕ್ಕೆ ಆರ್ಥಿಕ ಸಹಕಾರ ನೀಡಿ ಸೇವಾ ಕಾರ್ಯ ನಿರ್ವಹಿಸುವ ಮೂಲಕ ದೇಶದಲ್ಲಿಯೇ ಮಾದರಿ ಸಂಘಟನೆಯಾಗಿದೆ. ರಾಜ್ಯದಲ್ಲಿ 2.60 ಲಕ್ಷ ಹುದ್ದೆಗಳು ಖಾಲಿಯಿದ್ದರೂ ಸಹ ಸರ್ಕಾರವು ಜನ ಸಾಮಾನ್ಯರ ಕಲ್ಯಾಣ ಹಾಗೂ ರಾಜ್ಯದ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸುವ ಯೋಜನೆಗಳನ್ನು ಶ್ರೀಸಾಮಾನ್ಯರಿಗೆ ತಲುಪಿಸುವ ಕಾರ್ಯದ ಜೊತೆ ರಾಜ್ಯದ ಅಭಿವೃದ್ಧಿ ಸೂಚ್ಯಂಕದ ಬೆಳವಣಿಗೆಯಲ್ಲಿ ಹಾಗೂ ಜಿ.ಎಸ್.ಟಿ. ತೆರಿಗೆ ಸಂಗ್ರಹಣೆಯಲ್ಲಿ ಇಡೀ ದೇಶಕ್ಕೆ ಮಾದರಿಯಾಗಲು ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದೆ. ಇಂತಹ ಕಾರ್ಯಾಂಗದ ನೌಕರರ ಬೇಡಿಕೆಗಳನ್ನು ಈಡೇರಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ.

ತಾಲೂಕು ಸರಕಾರಿ ನೌಕರರ ಸಂಘದವರು ಶಾಸಕರಿಗೆ ಮನವಿ ನೀಡಿದ ಬಳಿಕ ಮಿನಿವಿಧಾನ ಸೌಧದಲ್ಲಿರುವ ತಹಶೀಲ್ದಾರ್‌ರವರ ಕಛೇರಿಗೂ ತೆರಳಿ ಸರಕಾರಿ ನೌಕರರ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಮನವಿಯನ್ನು ನೀಡಲಾಯಿತು. ಮನವಿ ಸ್ವೀಕರಿಸಿದ ಶಾಸಕ ಅಶೋಕ್‌ ಕುಮಾರ್ ರೈಯವರು ಈ ಬಗ್ಗೆ ಸರಕಾರದ ಗಮನ ಸೆಳೆಯುತ್ತೇನೆ ಎಂದು ಸರಕಾರಿ ನೌಕರರಿಗೆ ಭರವಸೆಯನ್ನು ನೀಡಿದರು.

ಮನವಿ ನೀಡುವ ಸಂದರ್ಭದಲ್ಲಿ ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಶಿವಾನಂದ ಆಚಾರ್ಯ, ರಾಜ್ಯ ಪರಿಷತ್‌ ಸದಸ್ಯ ಪುರುಷೋತ್ತಮ, ಕಾರ್ಯದರ್ಶಿ ಅಬ್ರಹಾಂ ಎಸ್.ಎ, ಗೌರವಾಧ್ಯಕ್ಷ ರಾಮಚಂದ್ರ, ಉಪಾಧ್ಯಕ್ಷರುಗಳಾದ ಹರಿಪ್ರಕಾಶ್ ಬೈಲಾಡಿ, ವಿಜಯಕುಮಾ‌ರ್, ಹೊನ್ನಪ್ಪ ಗೌಡ, ಪದ್ಮಾವತಿ, ಪಿಡಿಒ ಸಂಘದ ಅಧ್ಯಕ್ಷ ನಾಗೇಶ್‌, ತಾಲೂಕು ಪ್ರಾಥಮಿಕ ಶಿಕ್ಷಕರ ಸಂಘದ ಅಧ್ಯಕ್ಷ ನಾಗೇಶ್, ಡಿ ಗ್ರೂಪ್ ನೌಕರರ ಸಂಘದ ಅಧ್ಯಕ್ಷ ಚಂದ್ರು, ಸರಕಾರಿ ವಾಹನ ಚಾಲಕರ ಸಂಘದ ಮಾಜಿ ಅಧ್ಯಕ್ಷ ಗಿರಿಧರ್ ಗೌಡ, ತೋಟಗಾರಿಕೆ ಇಲಾಖೆಯ ಸುಧೀರ್, ಶಿಕ್ಷಣ ಇಲಾಖೆಯ ಅಶ್ರಫ್, ತನುಜಾ ಝೇವಿಯರ್, ಕಂದಾಯ ಇಲಾಖೆಯ ಸುಲೋಚನಾ, ಚೆನ್ನಪ್ಪ ಗೌಡ, ಆರೋಗ್ಯ ಇಲಾಖೆಯ ದೀಪಿಕಾ ವಾಗ್ಲೆ ಸಹಿತ ತಾಲೂಕಿನ ಎಲ್ಲಾ ಸರಕಾರಿ ಇಲಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *