ಉಡುಪಿ : ಪೇಜಾವರಶ್ರೀಗಳ ಪೂರ್ವಾಶ್ರಮದ ಸಹೋದರ ವಿದ್ವಾನ್ ರಾಮಚಂದ್ರ ಭಟ್ ವಿಧಿವಶ.

ಉಡುಪಿ : ಜ್ಯೋತಿಷ್ಯ, ವೇದ-ವೇದಾಂತ ಶಾಸ್ತ್ರಗಳಲ್ಲಿ ಪಾರಂಗತರಾಗಿದ್ದ ಮುಂಬಯಿ ಅದಮಾರು ಮಠದ ಶಾಖೆಯ ವ್ಯವಸ್ಥಾಪಕರಾಗಿ ಅನೇಕ ವರ್ಷ ಸೇವೆ ಸಲ್ಲಿಸಿದ್ದ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರ ಐದನೇ ಪರ್ಯಾಯ ಅವಧಿಯಲ್ಲಿ ಶ್ರೀಕೃಷ್ಣ ಮಠದ ಸಹ ದಿವಾನರಾಗಿಯೂ ಸೇವೆ ಸಲ್ಲಿಸಿದ್ದ ಪೇಜಾವರಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಪೂರ್ವಾಶ್ರಮದ ಸಹೋದರ ವಿದ್ವಾನ್ ಅಂಗಡಿಮಾರು ರಾಮಚಂದ್ರ ಭಟ್(72) ನಿಧನರಾಗಿದ್ದಾರೆ.

ಅಲ್ಪಕಾಲದ ಅಸೌಖ್ಯದಿಂದ ಬಳಲುತ್ತಿದ್ದ ಅವರು ಇಂದು ತಾವು ವಾಸ್ತವ್ಯವಿದ್ದ ಉಡುಪಿ ಪೇಜಾವರ ಮಠದ ಅತಿಥಿಗೃಹದಲ್ಲಿ ಕೊನೆಯುಸಿರೆಳೆದಿದ್ದಾರೆ. ಪತ್ನಿ, ಓರ್ವ ಪುತ್ರ, ಸಹೋದರ, ಸಹೋದರಿಯರು ಹಾಗೂ ಅಪಾರ ಶಿಷ್ಯರ ಬಳಗವನ್ನು ಅಗಲಿದ್ದಾರೆ.

ದ್ವಾನ್ ರಾಮಚಂದ್ರ ಭಟ್ಟರ ನಿಧನಕ್ಕೆ ಪಲಿಮಾರು ಶ್ರೀ ವಿದ್ಯಾಧೀಶತೀರ್ಥರು, ಪೇಜಾವರ ವಿಶ್ವಪ್ರಸನ್ನ ತೀರ್ಥರು ಸೇರಿದಂತೆ ಸ್ವಾಮೀಜಿಗಳು, ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ವಿದ್ವಾನ್ ರಾಮಚಂದ್ರ ಭಟ್ಟರ ಅಪೇಕ್ಷೆಯಂತೆಯೇ ಪಾರ್ಥಿವ ಶರೀರವನ್ನು ಮಣಿಪಾಲದ ಕೆಎಂಪಿ ಕಾಲೇಜಿನ ವಿದ್ಯಾರ್ಥಿಗಳ ಅಧ್ಯಯನಕ್ಕೆ ನೀಡಲಾಗಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!