ಶಿರೂರು ಗುಡ್ಡ ಕುಸಿತ ದುರಂತ : ಮೃತದೇಹಕ್ಕೆ ಹೆಗಲುಕೊಟ್ಟ ಮಂಗಳೂರಿನ ಪತ್ರಕರ್ತರು.

ಶಿರೂರು : ಶಿರೂರು ಗುಡ್ಡ ಕುಸಿತ ದುರಂತದಲ್ಲಿ ನೀರುಪಾಲಾಗಿದ್ದ ಉಳವರೆ ಗ್ರಾಮದ ನಿವಾಸಿ ಸಣ್ಣಿ ಹನುಮಂತ ಗೌಡ ಎಂಬ ವೃದ್ಧೆಯ ಮೃತದೇಹ ಮಂಗಳವಾರ ಬೆಳಗ್ಗೆ ಗಂಗಾವಳಿ ನದಿಯ ತೀರದಲ್ಲಿ ಪತ್ತೆಯಾಗಿದ್ದು, ಪೋಸ್ಟ್ ಮಾರ್ಟಂ ನಡೆಸಿದ ಬಳಿಕ ಕುಟುಂಬಿಕರಿಗೆ ಹಸ್ತಾಂತರ ಮಾಡಲಾಯಿತು.


ದುರಂತದಲ್ಲಿ ಉಳವರೆ ಗ್ರಾಮದ 6 ಮನೆಗಳು ಸಂಪೂರ್ಣ ನಾಮಾವಶೇಷವಾಗಿದೆ. 18ರಷ್ಟು ಮನೆಗಳು ಭಾಗಶ: ಹಾನಿಗೊಳಗಾಗಿದೆ.

ಬೇಸರದ ಸಂಗತಿ ಎಂದರೆ ಮೃತದೇಹವನ್ನು ಕುಟುಂಬಿಕರಿಗೆ ಹಸ್ತಾಂತರ ಮಾಡುವ ಸಂದರ್ಭದಲ್ಲಿ ಜಿಲ್ಲಾಡಳಿತದ ಅಧಿಕಾರಿಗಳು, ಕಂದಾಯ ಇಲಾಖೆ, ಸ್ಥಳೀಯ ಆಡಳಿತ, ಶಾಸಕರು ಹೀಗೆ ಯಾರೆಂದರೆ ಯಾರೂ ಇರಲಿಲ್ಲ. ಗ್ರಾಮದ ಮಕ್ಕಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ ಮಹಿಳೆಯರು ಗಂಜಿ ಕೇಂದ್ರದಲ್ಲಿದ್ದಾರೆ.


ಹೊರುವವರಿಲ್ಲದೆ ರಸ್ತೆಯೂ ಸರಿಯಿಲ್ಲದೇ ವೃದ್ಧೆಯ ಶವ ಆಂಬುಲೆನ್ಸ್ ನಲ್ಲಿ ಉಳಿದಿದ್ದು ಕೊಳೆತ ವಾಸನೆಯಿಂದಾಗಿ ಯಾರೂ ಹೊರಲು ಸಿದ್ಧರಿರಲಿಲ್ಲ. ಈ ವೇಳೆ ಸ್ಥಳದಲ್ಲಿದ್ದ ಮಂಗಳೂರಿನ ಪತ್ರಕರ್ತರು ಮೃತದೇಹವನ್ನು ತಾವೇ ಹೊತ್ತುಕೊಂಡು ಸಾಗಿ ಮನೆಯವರಿಗೆ ಒಪ್ಪಿಸಿ ಮುಂದಿನ ಅಂತಿಮ ಸಂಸ್ಕಾರ ನಡೆಸಲು ನೆರವಾಗಿ ಮಾನವೀಯತೆ ಮೆರೆದಿದ್ದಾರೆ. ನಿರಾಶ್ರಿತರು ಮತ್ತು ಘಟನೆಯಲ್ಲಿ ಸಂತ್ರಸ್ತರಾದವರಿಗೆ ಸಾಂತ್ವನ ನೀಡಲು ಮಂಗಳೂರಿನಿಂದ ತೆರಳಿದ್ದ ಪತ್ರಕರ್ತರ ಚಾರಣ ತಂಡದ ಸದಸ್ಯರಾದ ಮೋಹನ್ ಕುತ್ತಾರ್, ಶಶಿ ಬೆಳ್ಳಾಯರು, ಆರಿಫ್ ಯುಆರ್ ಕಲ್ಕಟ್ಟ, ಗಿರೀಶ್ ಮಳಲಿ, ಶಿವಶಂಕರ್ ಅವರು ಶವಸಂಸ್ಕಾರದಲ್ಲಿ ಸಹಕರಿಸಿದರು.
ಶಿರೂರು ಗುಡ್ಡ ಕುಸಿತ ಉಂಟಾದಾಗ ಹೆದ್ದಾರಿಯಲ್ಲಿದ್ದ ಗ್ಯಾಸ್ ಟ್ಯಾಂಕರ್ ನೀರಿಗೆ ಬಿದ್ದು ಭಾರೀ ಸದ್ದಿನೊಂದಿಗೆ ಸ್ಫೋಟ ಸಂಭವಿಸಿತ್ತು. ಇದರಿಂದಲೇ ಉಳವರೆ ಗ್ರಾಮ ನಾಶಗೊಂಡು ಹಲವರು ಪ್ರಾಣ ಕಳೆದುಕೊಳ್ಳುವಂತಾಯ್ತು ಎನ್ನುವ ಅಭಿಪ್ರಾಯ ಸ್ಥಳೀಯರಿಂದ ವ್ಯಕ್ತವಾಗಿದೆ. ನೀರು‌ ಚಿಮ್ಮುತ್ತಿದ್ದಂತೆ ಬಾಂಬ್‌ನಂತೆ ಸ್ಫೋಟದ ಸದ್ದು ಕೇಳಿದ್ದಾಗಿ ಸ್ಥಳೀಯರು ಮಾಹಿತಿ ನೀಡಿರುವುದರಿಂದ ಈ ಸಂಶಯ ಬಲವಾಗಿದೆ. ಈ ನಡುವೆ ಕೇರಳ ಟ್ಯಾಂಕರ್ ಡ್ರೈವರ್ ಅರ್ಜುನನಿಗಾಗಿ‌ ಶೋಧ ಮುಂದುವರಿದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?