ಪಡುಬಿದ್ರಿ: ರಸ್ತೆ ದಾಟುತ್ತಿದ್ದ ವ್ಯಕ್ತಿಯೊಬ್ಬರಿಗೆ ಬೈಕ್ ಢಿಕ್ಕಿಯಾಗಿ ಮೃತ್ಯು

ಪಡುಬಿದ್ರಿ: ಉಡುಪಿ ಜಿಲ್ಲೆಯ ಪಡುಬಿದ್ರಿ ಸಮೀಪದ ತೆಂಕ ಎರ್ಮಾಳಿನ ಹೊಟೇಲ್‌ ಅಪೂರ್ವ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ರಾತ್ರಿ ಮೋಟಾರು ಬೈಕೊಂದು ಢಿಕ್ಕಿಯಾಗಿ ಹೆದ್ದಾರಿಯನ್ನು ದಾಟುತ್ತಿದ್ದ ಬಡಾ ಎರ್ಮಾಳಿನ ಮಹಾಬಲ (64) ಅವರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಉಡುಪಿ ಕಡೆಯಿಂದ ಮಂಗಳೂರು ಕಡೆಗೆ ಹೋಗುವ ರಾ. ಹೆ. 66ರ ಏಕಮುಖ ಸಂಚಾರ ರಸ್ತೆಯಲ್ಲಿ ಮೃತ ಮಹಾಬಲರಿಗೆ ಮೋಟಾರು ಸೈಕಲ್‌ ಢಿಕ್ಕಿ ಹೊಡೆಯಿತು ಎನ್ನಲಾಗಿದೆ.

ಬೈಕ್‌ ಸವಾರ ಹಾಗೂ ರಸ್ತೆ ದಾಟುತ್ತಿದ್ದ ವ್ಯಕ್ತಿ ಇಬ್ಬರೂ ರಸ್ತೆಗೆ ಬಿದ್ದರು. ತಲೆಗೆ ಗಂಭೀರ ಗಾಯಗೊಂಡು ಮಾತನಾಡಲಾಗದ ಸ್ಥಿತಿಯಲ್ಲಿದ್ದ ಮಹಾಬಲ ಹಾಗೂ ಬೈಕ್‌ ಸವಾರ ವಿನೋದ್‌ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಪಲ್ಸರ್‌ ಬೈಕ್‌ನ ಸವಾರ ವಿನೋದ್‌ ಅತೀವೇಗ ಮತ್ತು ಅಜಾಗರೂಕತೆಯಿಂದ ರಸ್ತೆಯ ತೀರಾ ಬಲಕ್ಕೆ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿದ್ದು, ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಕೃಷಿ ಕಾರ್ಮಿಕರಾಗಿದ್ದ ಮಹಾಬಲ ಅವರು ಕೂಲಿ ಕೆಲಸದಿಂದ ತಮ್ಮ ಕುಟುಂಬ ನಿರ್ವಹಣೆಯನ್ನು ಮಾಡುತ್ತಿದ್ದರು.ಮೃತರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?