ಉಪ್ಪಿನಂಗಡಿಯ 34 ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭ ಮಾದಕ ವಸ್ತು ಸಾಗಾಟ- ಆರೋಪಿಗಳ ಬಂಧನ.

ಪುತ್ತೂರು : ಆಟೋ ರಿಕ್ಷಾದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಮೂವರು ಆರೋಪಿಗಳನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ಮಾದಕ ವಸ್ತು ಸಾಗಾಟಕ್ಕೆ ಬಳಸಿದ್ದ ಆಟೋ ರಿಕ್ಷಾ ಹಾಗೂ 9.36 ಗ್ರಾಂ ನಿಷೇಧಿತ ಎಂಡಿಎಂಎ ವಶಕ್ಕೆ ಪಡೆದಿದ್ದಾರೆ.

ಕೆದಿಲ ಗ್ರಾಮದ ಗಡಿಯಾರ ನಿವಾಸಿ ಮೊಹಮ್ಮದ್ ನಾಸೀರ್ (24) ಹಾಗೂ ಪೆರಾಜೆ ಗ್ರಾಮದ ಏನಾಜೆ ಬುಡೋಳಿ ನಿವಾಸಿ ಮುಹಮ್ಮದ್ ಆಸೀಫ್ ಬಿ (21) ಮತ್ತು ಸಿನಾನ್ ಬಂಧಿತ ಆರೋಪಿಗಳು.

ಉಪ್ಪಿನಂಗಡಿ ಪೊಲೀಸ್ ಠಾಣಾ ಉಪನಿರೀಕ್ಷಕ ಅವಿನಾಶ್ ಎಚ್. ಮತ್ತು ಸಿಬ್ಬಂದಿ ಆ.9ರಂದು 34 ನೆಕ್ಕಿಲಾಡಿ ಗ್ರಾಮದ ನೆಕ್ಕಿಲಾಡಿ ಜಂಕ್ಷನ್ ಬಳಿ ವಾಹನ ತಪಾಸಣೆ ನಡೆಸುತ್ತಿದ್ದ ಸಂದರ್ಭದಲ್ಲಿ ಆಟೋ ರಿಕ್ಷಾವೊಂದನ್ನು ತಪಾಸಣೆಗೆ ನಿಲ್ಲಿಸಲು ಸೂಚಿಸಿದಾಗ ನಿಲ್ಲದೇ ಮುಂದಕ್ಕೆ ಹೋಗಿ, ರಸ್ತೆ ಬದಿ ನಿಲ್ಲಿಸಿ ಚಾಲಕ ಮತ್ತು ಇನ್ನೊಬ್ಬಾತ ಓಡಿ ಪರಾರಿಯಾಗಲು ಯತ್ನಿಸಿದ್ದರು. ಈ ಸಂದರ್ಭ ಪೊಲೀಸರು ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಅಟೋ ರಿಕ್ಷಾದಲ್ಲಿ 18,720 ರೂ. ಮೌಲ್ಯದ 9.36 ಗ್ರಾಂ ನಿಷೇಧಿತ ಎಂಡಿಎಂಎ. ಮಾದಕ ವಸ್ತು ಹಾಗೂ 15 ಚಿಕ್ಕ ಚಿಕ್ಕ ಪ್ಲಾಸ್ಟಿಕ್ ಕವರ್‌ಗಳು ಪತ್ತೆಯಾಗಿವೆ. ಆಟೋ ರಿಕ್ಷಾ ಸಹಿತ ಮಾದಕ ವಸ್ತುವನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *