
ಸಮಾಜವನ್ನು ಇನ್ನಿಲ್ಲದಂತೆ ಕಾಡುತ್ತಿರುವ ಮಾದಕ ದ್ರವ್ಯ ಪಿಡುಗಿಗೆ ಕೊನೆಹಾಡುವ ಸಂಕಲ್ಪದೊಂದಿಗೆ ಗೃಹ ಸಚಿವರಾದ ಡಾ.ಜಿ. ಪರಮೇಶ್ವರ ಅವರ ಅಧ್ಯಕ್ಷತೆಯಲ್ಲಿ ಹಲವು ಸಚಿವರನ್ನು ಒಳಗೊಂಡ ಕಾರ್ಯಪಡೆಯನ್ನು ರಚಿಸಿ, ಆದೇಶ ಹೊರಡಿಸಲಾಗಿದೆ.
ಡ್ರಗ್ಸ್ ಹಾವಳಿ ನಿರ್ಮೂಲನೆಯ ಹೊಣೆ ಕೇವಲ ನಮ್ಮೊಬ್ಬರದ್ದಲ್ಲ, ಇದು ಸಮುದಾಯಿಕ ಜವಾಬ್ದಾರಿ. ಡ್ರಗ್ಸ್ ಮಾರಾಟ ಮತ್ತು ಸೇವನೆ ಕಂಡುಬಂದಲ್ಲಿ ಸಮೀಪದ ಪೊಲೀಸ್ ಠಾಣೆಗೆ ಮಾಹಿತಿ ನೀಡಿ, ನಮ್ಮ ಪ್ರಯತ್ನಕ್ಕೆ ಬೆಂಬಲವಾಗಿ ನಿಲ್ಲಿ. ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಡಲಾಗುವುದು.
ನಾವು – ನೀವು ಜೊತೆಗೂಡಿ ಡ್ರಗ್ಸ್ ಮುಕ್ತ – ಸ್ವಸ್ಥ ಕರ್ನಾಟಕ ನಿರ್ಮಿಸೋಣ star of kudla


