ಭೀಕರ ರಸ್ತೆ ಅಪಘಾತ: ಒಂದೇ ಕುಟುಂಬದ ನಾಲ್ವರು ಸಾವು.

ಉಡುಪಿ: ಮಿನಿ‌ ಲಾರಿ ಹಾಗೂ ದ್ವಿಚಕ್ರ ವಾಹನ ಮಧ್ಯೆ ಭೀಕರ ಅಪಘಾತ ನಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಮೃತಪಟ್ಟ ದಾರುಣ ಘಟನೆ ಕಾರ್ಕಳ- ಧರ್ಮಸ್ಥಳ- ಸುಬ್ರಹ್ಮಣ್ಯ ಹೆದ್ದಾರಿಯ ಹೊಸ್ಮಾರು ಪಾಜೆಗುಡ್ಡೆ ಬಳಿ ಸೋಮವಾರ ಮಧ್ಯಾಹ್ನ ಸಂಭವಿಸಿದೆ.ಬೈಕ್ ನಲ್ಲಿ ಪತಿ, ಪತ್ನಿ ಮತ್ತು ಮೂವರು ಮಕ್ಕಳು ಪ್ರಯಾಣಿಸುತ್ತಿದ್ದು, ಅಪಘಾತದ ರಭಸಕ್ಕೆ ನಾಲ್ವರು ಮೃತಪಟ್ಟಿದ್ದಾರೆ.

ಮೃತರನ್ನು ಸುರೇಶ್‌ ಆಚಾರ್ಯ (36 ವ), ಮಕ್ಕಳಾದ ಸುಮೀಕ್ಷಾ (7 ವ) ಸುಶ್ಮಿತಾ (5 ವ), ಸುಶಾಂತ್‌ (2 ವ) ಎಂದು ಗುರುತಿಸಲಾಗಿದೆ. ಸುರೇಶ್‌ ಆಚಾರ್ಯ ಅವರ ಪತ್ನಿ ಮೀನಾಕ್ಷಿ (32 ವ) ಗಂಭೀರ ಗಾಯಗೊಂಡಿದ್ದು, ಅವರನ್ನು ಕಾರ್ಕಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃತರನ್ನು ವೇಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಿಮಣೇಲು ಗಾಂಧಿನಗರ ನಿವಾಸಿ ಸೀತರಾಮ ಆಚಾರ್ಯ ರವರ ಕುಟುಂಬಿಕರು ಎಂದು ತಿಳಿದು ಬಂದಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೆ ತಿಳಿಯಬೇಕಿದೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?