ಲಂಚ ಸ್ವೀಕರಿಸಿ ಲೋಕಾಯುಕ್ತರ ಬಲೆಗೆ ಬಿದ್ದ ಭ್ರಷ್ಟ ಅಧಿಕಾರಿಗಳಿಗೆ ಜಾಮೀನು ನೀಡಲು ನಿರಾಕರಿಸಿ ಜೈಲಗೆ ಕಳುಸಿದ ಕೋರ್ಟ್

ಮಂಗಳೂರು : ಕಾಮಗಾರಿ ಬಿಲ್‌ ಪಾಸ್ ಮಾಡಲು ಪಿಡಬ್ಲ್ಯೂಡಿ ಕ್ಲಾಸ್-1 ಗುತ್ತಿಗೆದಾರರಿಂದ ಲಂಚ ಪಡೆಯುತ್ತಿದ್ದ ವೇಳೆ ಕಿನ್ನಿಗೋಳಿ ಪ.ಪಂ. ಮುಖ್ಯಾಧಿ ಕಾರಿ ಎಂ.ಆರ್. ಸ್ವಾಮಿ ಮತ್ತು ಜೂನಿ ಯರ್ ಎಂಜಿನಿಯರ್ ನಾಗ ರಾಜು ಜೆ.ಎಚ್. ಎಂಬವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದು ಜಾಮೀನು ನೀಡಲು ಕೋರ್ಟ್ ನಿರಾಕರಿಸಿದೆ.

ಆರೋಪಿಗಳು ನ್ಯಾಯಾಲಯಕ್ಕೆ ಜಾಮೀನು ಅರ್ಜಿ ಸಲ್ಲಿಸಿದ್ದು ಮಂಗಳೂರು 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ನ್ಯಾಯಾಲಯದ ನ್ಯಾಯಾಧೀಶರಾದ ಸಂಧ್ಯಾ ಎಸ್. ರವರು ವಿಚಾರಣೆ ನಡೆಸಿದ್ದು ನ್ಯಾಯಾಲಯ ಆರೋಪಿತರಿಗೆ ಜಾಮೀನು ನಿರಾಕರಿಸಿದೆ. ಇದರಿಂದಾಗಿ ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ಮುಂದುವರಿದಿದೆ. ಲೋಕಾಯುಕ್ತ ಸಂಸ್ಥೆಯ ಪರವಾಗಿ ವಿಶೇಷ ಸರಕಾರಿ ಅಭಿಯೋಜಕ ರವೀಂದ್ರ ಮುನ್ನಿಪ್ಪಾಡಿ ವಾದಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *