ಬಂಟ್ವಾಳ ಅಕ್ರಮ ಮರಳು ಅಡ್ಡೆಗೆ ದಾಳಿ; 20 ದೋಣಿ ವಶ.

ಬಂಟ್ವಾಳ ಅಕ್ರಮ ಮರಳು ಅಡ್ಡೆಗೆ ದಾಳಿ; 20 ದೋಣಿ ವಶ
ಬಂಟ್ವಾಳ:


ತಾಲೂಕಿನ ತುಂಬೆ, ಮಾರಿಪಳ್ಳ, ಭಾಗದ ನೇತ್ರಾವತಿ ನದಿಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಅಡ್ಡೆಗೆ ಆ.4ರ ಶುಕ್ರವಾರ ದಾಳಿ ನಡೆಸಿರುವ ಬಂಟ್ವಾಳ ಕಂದಾಯ ಇಲಾಖೆ ಹಾಗೂ ಗಣಿ ಇಲಾಖೆ ತಂಡ ಒಟ್ಟು 20 ದೋಣಿಗಳನ್ನು ವಶಪಡಿಸಿಕೊಂಡಿದೆ.


ದ.ಕ. ಜಿಲ್ಲಾಧಿಕಾರಿಯ ಆದೇಶದಂತೆ ಗಣಿ ಇಲಾಖೆಯ ತಂಡವು, ಬಂಟ್ವಾಳ ಕಂದಾಯ ಇಲಾಖೆ ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ನೆರವು ಪಡೆದು, ಕಾರ್ಯಚರಣೆ ನಡೆಸಿತ್ತು. ದಾಳಿಯ ವೇಳೆ ಸುಮಾರು 20
ದೋಣಿಗಳನ್ನು ಮಂಗಳೂರು ವಶಪಡಿಸಿಕೊಂಡು, ತಾಲೂಕಿನ ಅಡ್ಯಾರಿಗೆ ಸಳಾಂತರಿಸಲಾಗಿದೆ.


ವಶಪಡಿಸಿಕೊಂಡ ಯಾವುದೇ ದೋಣಿಗಳಲ್ಲಿ ಮರಳು ಪತ್ತೆಯಾಗಿಲ್ಲ. ಜೊತೆಗೆ ದಾಳಿಯ ವೇಳೆ ಮರಳುಗಾರಿಕೆಯಲ್ಲಿ ತೊಡಗಿದ್ದ ಕಾರ್ಮಿಕರು ಪರಾರಿಯಾಗಿದ್ದಾರೆ.
ಕಾರ್ಯಾಚರಣೆಯಲ್ಲಿ ಗಣಿ ಇಲಾಖೆಯ ಉಪನಿರ್ದೇಶಕಿ ಕೃಷ್ಣವೇಣಿ, ಹಿರಿಯ ಭೂ ವಿಜ್ಞಾನಿ ಗಿರೀಶ್ ಮೋಹನ್, ಭೂ ವಿಜ್ಞಾನಿ ಮಹಾದೇಶ್ವರ, ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್, ಮಂಗಳೂರು ಕಂದಾಯ ಇಲಾಖೆಯ ಪ್ರಶಾಂತ್ ಪಾಟೀಲ್, ಬಂಟ್ವಾಳ ಕಂದಾಯ ನಿರೀಕ್ಷಕ ಜನಾರ್ದನ, ಗ್ರಾಮಕರಣಿಕರು ಹಾಗೂ ಬಂಟ್ವಾಳ ಗ್ರಾಮಾಂತರ ಪೊಲೀಸರ ತಂಡ ಭಾಗವಹಿಸಿತ್ತು.

News Editor

Learn More →

Leave a Reply

Your email address will not be published. Required fields are marked *