ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಶಾರದಾ ಭಜನಾ ಮಂದಿರಕ್ಕೆ ಸಂಸದ ಬ್ರಿಜೇಶ್ ಚೌಟ ಭೇಟಿ.

ಮಾನ್ಯ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ಇಂದು ಶ್ರೀ ಶಾರದಾ ಭಜನಾ ಮಂದಿರಕ್ಕೆ ಭೇಟಿ ನೀಡಿ ಮಧ್ಯಾಹ್ನ ಪೂಜೆಯಲ್ಲಿ ಪಾಲ್ಗೊಂಡು ಶ್ರೀ ದೇವಿಯ ಪ್ರಸಾದವನ್ನು ಸ್ವೀಕರಿಸಿದರು. ಅವರಿಗೆ ಮಂದಿರದ ಗೌರವಾಧ್ಯಕ್ಷ ಕೆದಂಬಾಡಿ ಗುತ್ತು ಸೀತಾರಾಮ ರೈಯವರು ಶಾಲು ಹೊದಿಸಿ ಗೌರವಿಸಿದರು, ಮಂದಿರದ ಅಧ್ಯಕ್ಷ ಪಿ.ಜಿ.ಜಗನ್ನಿವಾಸ ರಾವ್ ರವರು ಅಕ್ಷರ ಯಜ್ಞ ಪುಸ್ತಕ ನೀಡಿದರು. ಈ ಸಂದರ್ಭದಲ್ಲಿ ಮಂದಿರದ ಕಾರ್ಯದರ್ಶಿ ಜಯಂತ್ ಉರ್ಲಾಂಡಿ, ಕೋಶಾಧಿಕಾರಿ ತಾರಾನಾಥ್ ಎಚ್, ಉಪಾಧ್ಯಕ್ಷ ಯಶವಂತ್ ಆಚಾರ್ಯ , ಜಲಜಾಕ್ಷಿ,ನಿಕಟ ಪೂರ್ವ ಶಾಸಕ ಸಂಜೀವ ಮಠಂದೂರು, ನಗರಸಭಾ ಅಧ್ಯಕ್ಷೆ ಶ್ರೀಮತಿ ಲೀಲಾವತಿ, ನಗರ ಸಭಾ ಸದಸ್ಯೆ ದೀಕ್ಷಾ ಪೈ,ಚನಿಲ ತಿಮ್ಮಪ್ಪ ಶೆಟ್ಟಿ, ಅಪ್ಪಯ್ಯ ಮಣಿಯಾಣಿ, ಸುನೀಲ್ ಆಳ್ವ, ದಯಾನಂದ ಉಜ್ರೆಮಾರ್, ಶಿವಕುಮಾರ್ ಪಿ.ಬಿ. ವಿರೂಪಾಕ್ಷ ಭಟ್, ಬಪ್ಪಳಿಗೆ ಚಂದ್ರಶೇಖರ ರಾವ್, ನಿತೇಶ್ ಕಲ್ಲೆಗ, ಹರಿಪ್ರಸಾದ್ ಯಾದವ್,ನವೀನ್ ಕುಲಾಲ್, ನಿತೇಶ್ ಶಾಂತಿವನ ಮೊದಲಾದವರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *