ನಿನ್ನೆ ಮಧ್ಯಾಹ್ನ ಬಂಧನಕ್ಕೆ ಒಳಗಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರುಗೆ ಸಂಜೆ ನ್ಯಾಯಾಲಯ ಜಾಮೀನು ಮಂಜೂರು.

ನಿನ್ನೆ ಮಧ್ಯಾಹ್ನ ಬಂಧನಕ್ಕೆ ಒಳಗಾಗಿದ್ದ ಉಪವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿ ಕಾಣಿಯೂರುಗೆ ಸಂಜೆ ನ್ಯಾಯಾಲಯ ಜಾಮೀನು ಮಂಜೂರು.

ಪುತ್ತೂರು: ಬಿಲ್ಲವ ಹೆಣ್ಣು ಮಕ್ಕಳನ್ನು ಹಾಗೂ ಭಜನೆ
ಸಂಕೀರ್ತನೆ ಮಾಡುವವರನ್ನು ನಿಂದಿಸಿರುವ ಆರೋಪದಡಿ ಇಂದು ಮಧ್ಯಾಹ್ನ ಬಂದಿತರಾಗಿದ್ದ ಪುತ್ತೂರು ಉಪ ವಲಯ ಅರಣ್ಯಾಧಿಕಾರಿ ಸಂಜೀವ ಪೂಜಾರಿಯವರಿಗೆ ಇಂದು ಸಂಜೆ ನ್ಯಾಯಾಲಯ ಜಾಮೀನು ಮಂಜೂರು ಮಾಡಿರುವುದಾಗಿ ತಿಳಿದು ಬಂದಿದೆ.

ಮೂರು ದಿನಗಳ ಹಿಂದೆ ಸಂಜೀವ ಪೂಜಾರಿಯವರು ಕೇರಳ ರಾಜ್ಯದ ಮಂಜೇಶ್ವರದ ವ್ಯಕ್ತಿಯೊಬ್ಬರ ಜತೆ ಆಡಿದರೆನ್ನಲಾದ ಫೋನ್ ಸಂಭಾಷಣೆಯ ಆಡಿಯೋ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಈ ಆಡಿಯೋದಲ್ಲಿ ಸಂಜೀವ ಪೂಜಾರಿಯವರು ಬಿಲ್ಲವ ಸಮುದಾಯದ ಮಹಿಳೆಯರನ್ನು ಹಾಗೂ ಭಜನ ಸಂಕೀರ್ತನೆಯಲ್ಲಿ ತೊಡಗಿಸಿಕೊಂಡಿರುವ ಹಿಂದೂ ಸಂಘಟನೆಯ ಕಾರ್ಯಕರ್ತರ ವಿರುದ್ದ ನಿಂದನಾತ್ಮಕವಾಗಿ ಮಾತನಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

ಹಿಂದು ಜಾಗರಣಾ ವೇದಿಕೆಯ ಸುಳ್ಯ ತಾಲೂಕು ಸಂಯೋಜಕ ಸಚಿನ್ ವಳಲಂಬೆ ಎಂಬವರು ಬೆಳ್ಳಾರೆ ಠಾಣೆಯಲ್ಲಿ ಈ ಕುರಿತು ದೂರು ನೀಡಿದ್ದರು . ದೂರು ಸ್ವೀಕರಿಸಿದ ಪೊಲೀಸರು ಎರಡು ದಿನದ ಬಳಿಕ ಗುರುವಾರ ಸಂಜೆ ಪ್ರಕರಣ ದಾಖಲಿಸಿದ್ದರು .

ಇಂದು ಆರೋಪಿಯನ್ನು ತಕ್ಷಣ ಬಂಧಿಸಬೇಕು ಎಂದು ಒತ್ತಾಯಿಸಿ ಪುತ್ತೂರು ಡಿವೈಎಸ್ಪಿ ಕಛೇರಿ ಮುಂಭಾಗ, ಹಿಂದೂ ಜಾಗರಣೆ ವೇದಿಕೆ ನೇತ್ರತ್ವದಲ್ಲಿ ಸಂಘಪರಿವಾರದ ಅಂಗ ಸಂಸ್ಥೆಗಳು ಪ್ರತಿಭಟನೆ ನಡೆಸಿತ್ತು. ಅಲ್ಲದೇ ತಕ್ಷಣ ಬಂಧಿಸಬೇಕು ಎಂದು ಅಗ್ರಹಿಸಿ ಡಿವೈಎಸ್ಪಿ ಕಛೇರಿ ಮುಂಭಾಗ ಭಜನೆ ಹಾಡುವ ಮೂಲಕ ಪ್ರತಿಭಟನಕಾರರು ದರಣಿ ಸತ್ಯಾಗ್ರಹ ಕೂಡ ನಡೆಸಿದ್ದರು.

ಇದಾದ ಕೆಲವೇ ಗಂಟೆಗಳ ಬಳಿಕ ಕಾಣಿಯೂರಿನ ನಿವಾಸದಿಂದ ಬೆಳ್ಳಾರೆ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದಿದ್ದರು. ಬಳಿಕ ಸಂಜೀವ ಪೂಜಾರಿಯವರನ್ನು ಸಂಜೆ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದು ಈ ವೇಳೆ ಅವರಿಗೆ ಸುಳ್ಯದ ನ್ಯಾಯಾಲಯವಉ ಜಾಮೀನು ಮಂಜೂರು ಮಡಿದೆ ಎಂದು ತಿಳಿದು ಬಂದಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?