ನನ್ನ ಜತೆ ಬಾ, ಇಲ್ಲಾಂದ್ರೆ 24 ತುಂಡು ಮಾಡುವೆʼ ಎಂದ ಶಾರೀಕ್; ಡೆತ್​ನೋಟ್​ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿದ ಯುವತಿ.

ಸುರತ್ಕಲ್​ನಲ್ಲಿ ವಾಸವಾಗಿರುವ ಓರ್ವ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. “ನನ್ನ ಪ್ರೀತಿಸುವಂತೆ ನಿನ್ನ ಸಹೋದರಿಗೆ ಹೇಳು, ಇಲ್ಲ ನಿನ್ನನ್ನು 24 ತುಂಡು ಮಾಡುವೆ ಅಂತ ಯುವಕನಿಗೆ ಬೆದರಿಕೆ ಸಂದೇಶ ಬಂದಿದೆ. ಮುಸ್ಲಿಂ ಸಮಾಜದ ವ್ಯಕ್ತಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ಆರೋಪ ಮಾಡಿದ್ದಾಳೆ.

ಆರೋಪಿ ಯುವತಿಯ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಿದ್ದಾನೆ. ಬಳಿಕ ಯುವತಿಯ ಫೇಸ್​ಬುಕ್​​ ಖಾತೆ ಮುಖಾಂತರ ಆಕೆಯ ಅಣ್ಣನಿಗೆ “ನನ್ನ ಜತೆ ಸಹಕರಿಸು, ಇಲ್ಲಾಂದ್ರೆ 24 ತುಂಡು ಮಾಡುವೆ’ ಎಂದು ಸಂದೇಶ ಕಳಸಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ. ಇನ್ನು, ಬೆದರಿಕೆ ಹಾಕಿದ ಆರೋಪಿ ಸೂರತ್ಕಲ್​​ನವನೇ ಎಂದು ಯುವತಿ ಹೇಳಿದ್ದಾಳೆ.

ಯುವತಿಯ ಫೇಸ್​ಬುಕ್ ಖಾತೆ ಹ್ಯಾಕ್ ಮಾಡಿ ಅದರ ಮೂಲಕ ಆಕೆಯ ಸಹೋದರನಿಗೆ ಬೆದರಿಕೆ ಸಂದೇಶ ಮತ್ತು ಯುವತಿಗೆ ಮಾನಸಿಕವಾಗಿ ಕಿರುಕುಳ ನೀಡಿದ ಆರೋಪದ ಮೇಲೆ ಆರೋಪಿ ವಿರುದ್ಧ ಸುರತ್ಕಲ್ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುರತ್ಕಲ್ ಪೊಲೀಸರು ಸದಾಶಿವನಗರದ ಶಾರಿಕ್‌ ನೂರ್ಜಹಾನ್‌ ಎಂಬುವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ವಶಕ್ಕೆ ಪಡೆದು ವಿಚಾರಣೆ ವೇಳೆ ಆರೋಪಿ ವಿರುದ್ಧ ಸಾಕ್ಷ್ಯ ಸಿಗದ ಹಿನ್ನೆಲೆಯಲ್ಲಿ ಪೊಲೀಸರು ಆತನನ್ನು ಬಿಟ್ಟು ಕಳುಹಿಸಿದ್ದಾರೆ.

ಈ ಬಳಿಕವೂ ಆರೋಪಿ ಯುವತಿಯ ಸಹೋದರಿನಿಗೆ ನಿರಂತರ ಬೆದರಿಕೆ ಸಂದೇಶ ಕಳುಹಿಸಿದ ಹಿನ್ನೆಲೆಯಲ್ಲಿ ಮನನೊಂದ ಯುವತಿ ಡೆತ್​ನೋಟ್​ ಬರೆದಿಟ್ಟು ನಿದ್ರೆ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಡೆತ್​​ನೋಟ್​ನಲ್ಲಿ “ಇಡ್ಯಾ ಸಮುದಾಯದ ಯುವಕ ಕಿರುಕುಳ ನೀಡುತ್ತಿದ್ದಾನೆ. ಪೊಲೀಸರಿಂದಲೂ ಯಾವುದೇ ನ್ಯಾಯ ಸಿಕ್ಕಿಲ್ಲ. ಒಬ್ಬ ಮುಸ್ಲಿಮನ ಕೈಯಲ್ಲಿ ಅತ್ಯಾಚಾರ ಆಗಿ ಸಾಯುವ ಬದಲು ಈಗಲೇ ಸಾಯುತ್ತೇನೆ. ಶಾರೀಕ್ ಹಾಗೂ ನೂರ್ಜಾನ್ ಇಬ್ಬರನ್ನು ಬಿಡಬಾರದು” ಎಂದು ಡೆತ್​ನೋಟ್​ ಬರೆದಿದ್ದಾಳೆ.

News Editor

Learn More →

Leave a Reply

Your email address will not be published. Required fields are marked *