ಸೈಬರ್ ವಂಚಕರಿಗೆ ಭಾರತದಿಂದ 500ಕ್ಕೂ ಹೆಚ್ಚು ಸಿಮ್ ಪೂರೈಸಿದ್ದ ಆರೋಪಿ ಬಂಧನ.

ಮಂಗಳೂರಿನ ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಸೈಬರ್ ವಂಚಕರಿಗೆ ಸಿಮ್ ಕಾರ್ಡ್‌ಗಳನ್ನು ಪೂರೈಸುತ್ತಿದ್ದ ಕಣಾತಲ ವಾಸುದೇವ ರೆಡ್ಡಿ ಎಂಬಾತನನ್ನು ಬಂಧಿಸಿದ್ದಾರೆ. ಅವನು 500ಕ್ಕೂ ಹೆಚ್ಚು ಸಿಮ್ ಕಾರ್ಡ್‌ಗಳನ್ನು ಪೂರೈಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಂಧನವು ಒಂದು ದೊಡ್ಡ ಸೈಬರ್ ಕ್ರೈಂ ಜಾಲವನ್ನು ಬಯಲು ಮಾಡಿದೆ. ಪೊಲೀಸರು ಇನ್ನೂ ತನಿಖೆ ಮುಂದುವರಿಸಿದ್ದಾರೆ.

ಮಂಗಳೂರು, ಡಿಸೆಂಬರ್ 23: ಸೈಬರ್ ವಂಚಕರಿಗೆ ಸಿಮ್ ಕಾರ್ಡ್ ಪೂರೈಸುತ್ತಿದ್ದ ಆರೋಪಿಯನ್ನು ಮಂಗಳೂರಿನ  ಸೆನ್ ಕ್ರೈಂ ಪೊಲೀಸರು ದೆಹಲಿ ವಿಮಾನ ನಿಲ್ದಾಣದಲ್ಲಿ ಬಂಧಿಸಿದ್ದಾರೆ. ಕಣಾತಲ ವಾಸುದೇವ ರೆಡ್ಡಿ (25) ಬಂಧಿತ ಆರೋಪಿ. ಆರೋಪಿ ಸೈಬರ್ ವಂಚಕರಿಗೆ ಭಾರತದಿಂದ ವಿವಿಧ ಕಂಪನಿಗಳ 500ಕ್ಕೂ ಹೆಚ್ಚು ಸಿಮ್ಗಳನ್ನು ಪೂರೈಕೆ ಮಾಡಿದ್ದನು

ಆರೋಪಿ ಕಣಾತಲ ವಾಸುದೇವ ರೆಡ್ಡಿ ಓಡಿಶಾ ಮೂಲದವನು. ಸೈಬರ್ ವಂಚನೆ ಪ್ರಕರಣದ ತನಿಖೆ ನಡೆಸುತ್ತಿದ್ದ ವೇಳೆ ಆರೋಪಿ ಕಣಾತಲ ವಾಸುದೇವ ರೆಡ್ಡಿ ಸಿಮ್ ಪೂರೈಕೆ ಮಾಹಿತಿ ಮಂಗಳೂರಿನ ಸೆನ್ ಪೊಲೀಸರಿಗೆ ಗೊತ್ತಾಗಿದೆ. ಕೂಡಲೇ ಕಾರ್ಯಪ್ರವೃತ್ತರಾದ ಪೊಲೀಸರು ಆರೋಪಿ ಕಣಾತಲ ವಾಸುದೇವ ರೆಡ್ಡಿಯ ಹೆಡೆಮುರಿ ಕಟ್ಟುವಲ್ಲಿ ಯಶಸ್ವಿಯಾದರು.

ವಂಚಕ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜು ಎಂಬುವನು ಹಣ ವಿನಿಯೋಗಿಸಲು ವಾಟ್ಸಾಪ್​ ಮೂಲಕ ನಕಲಿ ಲಿಂಕ್ ಕಳುಹಿಸಿ ಅದರ ಮೂಲಕ ಲಕ್ಷಾಂತರ ರೂ. ದೋಚಿದ್ದನು. ಹೀಗೆ, ಹಂತ ಹಂತವಾಗಿ 10,84,017 ರೂಪಾಯಿ ಪಡೆದು ವಂಚನೆ ಎಸಗಿದ್ದಾನೆ. ಪ್ರಕರಣ ಸಂಬಂಧ ಪೊಲೀಸರು ಈಗಾಗಲೇ ಸೈಬರ್​ ವಂಚಕ ನಡವೂಲು ವೀರವೆಂಕಟ ಸತ್ಯನಾರಾಯಣ ರಾಜುನನ್ನು ಬಂಧಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *