ಪುತ್ತೂರಿನ ನರಿಮೊಗರಿನಲ್ಲಿ ನೇಣಿಗೆ ಶರಣಾದ ಕಾಲೇಜ್ ವಿದ್ಯಾರ್ಥಿನಿ.

ಪುತ್ತೂರು :ಪುತ್ತೂರಿನ ಸಂತ ಫಿಲೋಮೀನ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿಯೊಬ್ಬಳು ಮನೆಯೊಳಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.9ರಂದು ಸಂಜೆ ನಡೆದಿದೆ.

ನರಿಮೊಗರು ಕೂಡುರಸ್ತೆಯ ಕೇಶವ ಜೋಗಿ ಎಂಬವರ ಪುತ್ರಿ ಸಂತ ಪಿಲೋಮಿನಾ ಕಾಲೇಜಿನ ಪ್ರಥಮ ಪಿಯುಸಿ ವಿದ್ಯಾರ್ಥಿನಿ ದೀಕ್ಷಿತಾ(17ವ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ದೀಕ್ಷಿತಾ ಅವರು ಜ 9 ರಂದು ಕಾಲೇಜಿಗೆ ಹೋಗಿದ್ದು ಅಲ್ಲಿಂದ ಸಂಜೆ ವಾಪಸ್ಸು ಮನೆಗೆ ಬಂದಿದ್ದಾರೆ. ಬಳಿಕ ಮನೆಯ ಕೊಠಡಿಯಲ್ಲಿ ನೇಣು ಬಿಗಿದು ಅತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೃತರು ತಂದೆ ಕೇಶವ, ತಾಯಿ ಪುಷ್ಪಾ. ಸಹೋದರ ದೀಕ್ಷಿತ್ ಅವರನ್ನು ಅಗಲಿದ್ದಾರೆ.

ಪುತ್ತೂರು ನಗರ ಠಾಣೆಯ ಪೊಲೀಸರು ಕೇಸ್ ದಾಖಲಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *