
ರಾಜ್ಯದಲ್ಲಿ ಪಕ್ಷವನ್ನು ತಳಮಟ್ಟದಿಂದ ಕಟ್ಟಿ, ದಕ್ಷಿಣ ಭಾರತದಲ್ಲಿ ಕಮಲವನ್ನು ಅರಳಿಸಿದ ಧೀಮಂತ ನಾಯಕ, ಜನಪರ ಯೋಜನೆಗಳ ಸರದಾರ, ರೈತ ಬಂಧು, ಮಾಜಿ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪ ನವರ 82ನೇ ಜನ್ಮ ದಿನಾಚರಣೆ ಅಂಗವಾಗಿ ಭಾರತೀಯ ಜನತಾ ಪಾರ್ಟಿ ಪುತ್ತೂರು ವಿಧಾನಸಭಾ ಕ್ಷೇತ್ರ ಗ್ರಾಮಾಂತರ ಮತ್ತು ನಗರ ಮಂಡಲದ ವತಿಯಿಂದ ಮಹಾತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀಯುತರಿಗೆ ಆಯುರಾರೋಗ್ಯ , ಸುಖ ಶಾಂತಿ , ನೆಮ್ಮದಿ , ಪ್ರಾಪ್ತಿಯಾಗಲೆಂದು ವಿಶೇಷ ಪ್ರಾರ್ಥನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲದ ಅಧ್ಯಕ್ಷರಾದ ದಯಾನಂದ ಶೆಟ್ಟಿ ಉಜಿರೆಮಾರು , ನಗರ ಮಂಡಲ ಅಧ್ಯಕ್ಷರಾದ ಶಿವಕುಮಾರ್ ಪಿ ಬಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಸನ್ನ ಮಾರ್ತ , ಜಿಲ್ಲಾ ಕಾರ್ಯದರ್ಶಿ ವಿದ್ಯಾ ಗೌರಿ , ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ವಿರೂಪಾಕ್ಷ ಭಟ್ , ನಗರಸಭಾ ಸದಸ್ಯೆ ದರ್ಬೆ ಮಹಾಶಕ್ತಿಕೇಂದ್ರ ಅಧ್ಯಕ್ಷೆ ದೀಕ್ಷಾ ಪೈ , ನಗರ ಶಕ್ತಿಕೇಂದ್ರ ದ ಅದ್ಯಕ್ಷೆ ಆಶಾಭಗವಾನ್, ಪುತ್ತೂರು ಟೌನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷರಾದ ಕಿಶೋರ್ ಕೊಳತ್ತಾಯ , ನಗರ ಮಂಡಲ ಕಾರ್ಯದರ್ಶಿ ಮಣಿಕಂಠ , ನಗರ ಮಹಿಳಾ ಮೋರ್ಚದ ಪ್ರ.ಕಾರ್ಯದರ್ಶಿ ಜಯಲಕ್ಷ್ಮಿ ಶಗ್ರಿತ್ತಾಯ , ನೆಟ್ಟಣಿಗೆ ಮುಡ್ನೂರು ಮಹಾಶಕ್ತಿಕೇಂದ್ರದ ಅಧ್ಯಕ್ಷ ರಾಜೇಶ್ ರೈ ಸೇರಿದಂತೆ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.


