ಬ್ರಹ್ಮಾವರ: ವಿಶಾಲ ಗಾಣಿಗ ಕೊಲೆ ಪ್ರಕರಣ : ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಉಡುಪಿ: ಬ್ರಹ್ಮಾವರದಲ್ಲಿ ನಡೆದಿದ್ದ ವಿಶಾಲ ಗಾಣಿಗ ಕೊಲೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

ಬಂಧಿತ ಆರೋಪಿ ಧರ್ಮೇಂದ್ರ ಕುಮಾರ್ ಸುಹಾನಿ ಎಂದು ತಿಳಿಯಲಾಗಿದೆ.

2021ನೇ ಜುಲೈ ತಿಂಗಳಿನಲ್ಲಿ ಬ್ರಹ್ಮಾವರ ಠಾಣಾ ವ್ಯಾಪ್ತಿಯ  ಕುಮ್ರಗೋಡುವಿನಲ್ಲಿರುವ ಮಿಲನ ರೆಸಿಡೆನ್ಸಿಯಲ್ಲಿ ವಿಶಾಲ ಇವರ ಕೊಲೆಯಾಗಿದ್ದು ಸದ್ರಿ ಪ್ರಕರಣದಲ್ಲಿ ಆರೋಪಿತರಾದ ಆಕೆಯ ಗಂಡ ರಾಮಕೃಷ್ಣ, ಸ್ವಾಮಿನಾಥನ್ ನಿಷಾದ್, ರೋಹಿತ್ ರಾಣಾ ಪ್ರತಾಪ್ ಇವರುಗಳನ್ನು ಈಗಾಗಲೆ ಬಂಧಿಸಿ, ನ್ಯಾಯಾಂಗ  ಬಂಧನದಲ್ಲಿರುತ್ತಾರೆ.

ವಿಶಾಲ ಅವರ ಗಂಡ ರಾಮಕೃಷ್ಣ ಪ್ರಮುಖ ಆರೋಪಿತನಾಗಿದ್ದು ಈತನಿಗೂ ಹಾಗೂ ಸುಪಾರಿ ಕಿಲ್ಲರ್ ಸ್ವಾಮಿನಾಥನ್ ನಿಶಾದ್‌ನಿಗೂ ಪರಿಚಯ ಮಾಡಿಸಿ ವಿಶಾಲ ರವರ ಕೊಲೆಗೆ ಸಹಕರಿಸಿದ ಇನ್ನೋರ್ವ ಆರೋಪಿಯಾದ ಧರ್ಮೇಂದ್ರ ಕುಮಾರ್ ಸುಹಾನಿ ಈತನು ಪ್ರಕರಣ ದಾಖಲಾದ ವಿಚಾರ ತಿಳಿದು, 3 ವರ್ಷಗಳಿಂದ  ವಿದೇಶದಲ್ಲಿ ತಲೆಮರೆಸಿಕೊಂಡಿದ್ದವನನ್ನು ಬ್ರಹ್ಮಾವರ ಠಾಣಾ ಪಿಎಸ್ಐ ಮಧು ಬಿ. ಇ ಹಾಗೂ ಠಾಣಾ ಸಿಬ್ಬಂದಿಗಳಾದ ಶಾಂತರಾಜ್ ಎಎಸ್‌ಐ, ಸುರೇಶ ಬಾಬುರವರ ತಂಡವು ದಿನಾಂಕ: 02-02-2024 ರಂದು ಲಕ್ನೋ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದು ದಿನಾಂಕ 03-02-2024 ರಂದು ಮಾನ್ಯ ನ್ಯಾಯಾಲಯದ ಮುಂದೆ ಹಾಜರುಪಡಿಸಿ ನ್ಯಾಯಾಂಗ ಬಂಧನದಲ್ಲಿರಿಸಲಾಗಿರುತ್ತದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?