ಬಂಟ್ವಾಳ : 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ವಶಕ್ಕೆ

ಹಲ್ಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಸುಮಾರು 8 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಸಜೀಪ ಮುನ್ನೂರು ಗ್ರಾಮದ ನಂದಾವರ ನಿವಾಸಿ ಇಲಿಯಾಸ್ ಯಾನೆ ಇಲ್ಯಾಸ್ (50) ಬಂಧಿತ ಆರೋಪಿ.

ಬಂಟ್ವಾಳ ನಗರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಹಲ್ಲೆ ಪ್ರಕರಣದ ಆರೋಪಿಯಾಗಿದ್ದು, ಈತನ ಮೇಲೆ ಕಲಂ 341 , 504, 324,506 ಜೊತೆಗೆ 34 ಐಪಿಸಿ ಯಡಿಲ್ಲಿ ಪ್ರಕರಣ ದಾಖಲಾಗಿದ್ದು, ಸುಮಾರು 8 ವರ್ಷಗಳಿಂದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ.

ಈತನನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?