ಕಾರ್ಕಳ : ಪಳ್ಳಿಯ ಇಸ್ಪೀಟ್ ಜುಗಾರಿ ಅಡ್ಡೆಗೆ ಖಾಕಿ ರೇಡ್ : ಮೂವರು ಅಂದರ್.

ಸಾರ್ವಜನಿಕ ಸ್ಥಳದಲ್ಲಿ ಹಣ ಪಣವಾಗಿಟ್ಟು ಜುಗಾರಿ ಆಟದಲ್ಲಿ ನಿರತರಾಗಿದ್ದ ಮೂವರನ್ನು ಕಾರ್ಕಳ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

ಕಾರ್ಕಳ ನಗರ ಠಾಣೆಯ ಪೊಲೀಸ್‌ ಉಪನಿರೀಕ್ಷಕ ಸಂದೀಪ್‌ ಕುಮಾರ್‌ ಶೆಟ್ಟಿಯವರು  ಪಳ್ಳಿ ಶಾಲಾ ಬಳಿ ಸಾರ್ವಜನಿಕ ಸ್ಥಳದಲ್ಲಿ ಕೆಲವು ವ್ಯಕ್ತಿಗಳು ಹಣ ಪಣವಾಗಿಟ್ಟು ಇಸ್ಪೀಟು ಜುಗಾರಿ ಆಟ ಆಡುತ್ತಿದ್ದ ಸ್ಥಳಕ್ಕೆ ಖಚಿತ ಮಾಹಿತಿ ಮೇರೆಗೆ ದಾಳಿಯನ್ನು ನಡೆಸಿದ್ದರು.

ಲೋಕೇಶ್‌, ವೇಲು ಮುರುಗನ್‌ ಮತ್ತು ರಂಗನಾಥ್‌ ಎಂಬವರನ್ನು ವಶಕ್ಕೆ ಪಡೆದಿದ್ದು, ಅವರಿಂದ ಆಟಕ್ಕೆ ಬಳಸುತ್ತಿದ್ದ 5,500 ರೂ. ನಗದು, ಇಸ್ಪೀಟ್‌ ಎಲೆಗಳು, ಹಳೆಯ ದಿನಪತ್ರಿಕೆಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?