ಮಂಗಳೂರು ಪೋಲಿಸರ ಕಾರ್ಯಚರಣೆ,75 ಕೋಟಿ ಮೌಲ್ಯದ 38 ಕೆ.ಜಿ ಮೌಲ್ಯದ MDMA.

ಮಂಗಳೂರು ; ಮಂಗಳೂರು ನಗರ ಪೊಲೀಸರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು ಕರ್ನಾಟಕ ರಾಜ್ಯ ಪೊಲೀಸ್ ಇತಿಹಾಸದಲ್ಲೇ ಗರಿಷ್ಠ ಪ್ರಮಾಣದಲ್ಲಿ ಮಾದಕ ವಸ್ತುವನ್ನು ವಶಪಡಿಸಿಕೊಂಡ ಮೊದಲ ಪ್ರಕರಣ ಬೆಳಕಿಗೆ ಬಂದಿದೆ.

ದೇಶದ್ಯಾಂತ ಮಾದಕ ವಸ್ತು MDMA ಮಾರಾಟ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ದೇಶದ ಮಹಿಳಾ ಪ್ರಜೆಗಳಿಬ್ಬರ ಸೆರೆ 75 ಕೋಟಿ ಮೌಲ್ಯದ 37.870 ಕೆ.ಜಿ MDMA ವಶಪಡಿಸಿಕೊಂಡಿದ್ದಾರೆ.ಮತ್ತೊಂದು ಪಿಸೂಲ್ ಪ್ರಕರಣದಲ್ಲಿನ ಮುಂದುವರಿದ ಕಾರ್ಯಾಚರಣೆಯಲ್ಲಿ ಪಿಸ್ತೂಲ್ ಹೊಂದಿದ ಆರೋಪಿಯ ಸೆರೆಯಾಗಿದೆ ಪಿಸೂಲ್ ಹಾಗೂ ಸಜೀವ ಗುಂಡು ವಶಪಡಿಸಲಾಗಿದೆ.

“ಡ್ರಗ್ ಫಿ ಮಂಗಳೂರು” ಮಾಡುವ ನಿಟ್ಟಿನಲ್ಲಿ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ಚರ್ಜರಿ ಕಾರ್ಯಾಚರಣೆಯೊಂದರಲ್ಲಿ ಮಂಗಳೂರು ನಗರಕ್ಕೆ, ರಾಜ್ಯಕ್ಕೆ ಹಾಗೂ ಇತರ ರಾಜ್ಯಗಳಿಗೆ MDMA ಮಾದಕ ವಸ್ತುಗಳನ್ನು ಪೂರೈಕೆ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ದೇಶದ ವಿದೇಶಿ ಮಹಿಳಾ ಪ್ರಜೆಗಳಿಬ್ಬರನ್ನು ದಸಗಿರಿ ಮಾಡಿ 75 ಕೋಟಿ ಮೌಲ್ಯದ 37.870 ಕೆಜಿ ನಿಷೇಧಿತ ಮಾದಕ ವಸ್ತು MDMA ಯನ್ನು ಹಾಗೂ ಇತರ ಸೋತುಗಳನ್ನು ವಶಪಡಿಸಿಕೊಳ್ಳುವಲ್ಲಿ ಹಾಗೂ ಅಕ್ರಮ ಪಿಸ್ತೂಲ್ ಹೊಂದಿ ದುಷ್ಕೃತ್ಯವನ್ನು ಮಾಡಲು ಸಂಚು ರೂಪಿಸುತ್ತಿದ್ದ ಪ್ರಕರಣದಲ್ಲಿ ಆರೋಪಿಯನ್ನು ವಶಕ್ಕೆ ಪಡೆದು ಪಿಸ್ತೂಲ್ ಹಾಗೂ ಸಜೀವ ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.

ಆರೋಪಿಗಳನ್ನು ಸೌತ್ ಆಫ್ರಕಾದ ಪ್ರಜೆಗಳಾದ ಅಬಿಗೈಲ್ ಅಡೋನಿಸ್,ಬಾಂಬಾ ಫಾಂಟ ಎಂದು ತಿಳಿದಿದೆ.

2024 ನೇ ಇಸವಿಯಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಪಂಪ್ ವೆಲ್ ಬಳಿಯ ಲಾಡ್ಜ್ ವೊಂದರಲ್ಲಿ ಮಾದಕ ವಸ್ತುವನ್ನು ಹೊಂದಿಕೊಂಡು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಆರೋಪಿ ಹೈದರ್ @ ಹೈದರ್ ಅಲಿ ಎಂಬಾತನನ್ನು ದಸ್ತಗಿರಿ ಮಾಡಿ 15 ಗ್ರಾಂ MDMA ಯನ್ನು ಸ್ವಾಧೀನಪಡಿಸಿಕೊಂಡಿದ್ದಾರೆಂದು ತಿಳಿದುಬಂದಿದೆ.

ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿತ್ತು. ಈ ಪ್ರಕರಣದಲ್ಲಿ ಭಾಗಿಯಾದ ಪ್ರಮುಖ ಡ್ರಗ್ ಪೆಡ್ಲರ್ ಗಳನ್ನು ಪತ್ತೆ ಹಚ್ಚುವ ಸಲುವಾಗಿ ಪ್ರಕರಣ ತನಿಖೆಯನ್ನು ಮಂಗಳೂರು ಸಿಸಿಬಿ ಘಟಕಕ್ಕೆ ವರ್ಗಾಯಿಸಲಾಗಿತ್ತು. ಮಂಗಳೂರು ಸಿಸಿಬಿ ಪೊಲೀಸರು ತನಿಖೆ ಕೈಗೊಂಡು ಪ್ರಕರಣದಲ್ಲಿ ಹೈದರ್ ಆಲಿ ಮತ್ತು ಇನ್ನಿತರ ವ್ಯಕ್ತಿಗಳಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುತ್ತಿದ್ದ ಪ್ರಮುಖ ಡ್ರಗ್ ಪೆಡ್ಡರ್ ಬೆಂಗಳೂರಿನಲ್ಲಿ ವಾಸ್ತವ್ಯವಿದ್ದ ನೈಜೇರಿಯಾ ದೇಶದ ವಿದೇಶಿ ಪ್ರಜೆ Peter Ikedi Belonwu ಎಂಬಾತನನ್ನು ದಸ್ತಗಿರಿ ಮಾಡಿ ಆತನಿಂದ ೪ ಕನಾ ಗಲದ 6.248 ಕೆಜಿ ಮಾದಕ ವಸ್ತುವಾದ MDMA ಯನ್ನು ಈ ಹಿಂದೆ ವಶಪಡಿಸಿಕೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ಬೆಂಗಳೂರಿನ ಪೆಡ್ಡರ್ Peter Ikedi Belonwu ಎಂಬಾತನಿಗೆ ಮಾದಕ ವಸ್ತುವನ್ನು ಪೂರೈಕೆ ಮಾಡುವ ಕಿಂಗ್ ಫಿನ್ ಡ್ರಗ್ಸ್ ಪೆಡ್ಡರ್ ಗಳನ್ನು ಪತ್ತೆ ಹಚ್ಚುವ ಸಲುವಾಗಿ ಕಳೆದ 6 ತಿಂಗಳಿನಿಂದ ಮಂಗಳೂರು ಸಿಸಿಬಿ ಪೊಲೀಸರು ನಡೆಸಿದ ನಿರಂತರವಾದ ತನಿಖೆ ಹಾಗೂ ಮಾಹಿತಿಯನ್ನು ಸಂಗ್ರಹಿಸಿಕೊಂಡ ಸಮಯದಲ್ಲಿ ಈ ಪ್ರಕರಣದಲ್ಲಿ ದೆಹಲಿಯಿಂದ ಬೆಂಗಳೂರಿಗೆ ಹಾಗೂ ದೇಶದ ಇತರ ಕಡೆಗಳಿಗೆ ಮಾದಕ ವಸ್ತುವಾದ MDMA ಯನ್ನು ಬೃಹತ್ ಪ್ರಮಾಣದಲ್ಲಿ ವಿದೇಶಿ ಮಹಿಳಾ ಪ್ರಜೆಗಳು ವಿಮಾನ ಮಾರ್ಗದಲ್ಲಿ ಸಾಗಾಟ ಮಾಡುವ ಮಾಹಿತಿ ದೊರೆಯಿತು. ಈ ಪ್ರಕರಣದಲ್ಲಿ ಬೆಂಗಳೂರಿನ ಡ್ರಗ್ ಪೆಕ್ಟರ್ Peter Ikedi Belonwu ಮಾದಕ ವಸ್ತುವನ್ನು ಸಾಗಾಟ ಮಾಡಿದ ಆರೋಪಿಗಳು ದಿನಾಂಕ: 14-03-2025 ರಂದು ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಬಗ್ಗೆ ಖಚಿತ ಮಾಹಿತಿ ದೊರೆತಂತೆ ಮಂಗಳೂರು CCB ಪೋಲಿಸರು ಆರೋಪಿಗಳನ್ನು ವಶಪಡಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *