ಮಂಗಳೂರು: ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿ163ರಂತೆ ನಿಷೇಧಾಜ್ಞೆ ಜ್ಯಾರಿ.

ದಿನಾಂಕ: 01-05-2025 ರಂದು ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ನ ಬಜೈ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀರ್ವ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ ವಾತಾವರಣ ಉಂಟಾಗಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಗಳು ಹೆಚ್ಚಾಗಿರುತ್ತದೆ. ಆದುದರಿಂದ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯಸ್ಥೆಗೆ ಧಕ್ಕೆ ಬರುವಂತಹ ಯಾವುದೇ ಘಟನೆಗಳು ನಡೆಯದಂತ ತಡೆಗಟ್ಟುವ ಉದ್ದೇಶದಿಂದ ಮಂಗಳೂರು ನಗರ ಪೊಲೀಸ್ ಕಮೀಷನರೇಶ್‌ ವ್ಯಾಪ್ತಿಯಲ್ಲಿ ದಿನಾಂಕ: 02-05-2025 ರಂದು ಬೆಳಿಗ್ಗೆ 06-00 ಗಂಟೆಯಿಂದ ದಿನಾಂಕ: 06-05-2025 ರ ಬೆಳಿಗ್ಗೆ 06-00 ಗಂಟೆಯ ವರೆಗೆ ಭಾರತೀಯ ನ್ಯಾಯ ಸುರಕ್ಷಾ ಸಂಹಿತ ಕಲಂ: 163ರಂತೆ ನಿಷೇಧಾಜ್ಞೆಯನ್ನು ಜ್ಯಾರಿಗೊಳಿಸುವಂತೆ ಕೋರಿ ಪೊಲೀಸ್‌ ನಿರೀಕ್ಷಕರು, ನಗರ ವಿಶೇಷ ವಿಭಾಗ, ಮಂಗಳೂರು ನಗರ ಇವರು ಮೇಲ್ಕಂಡ ಉಲ್ಲೇಖದಂತೆ ವರದಿ ಮಾಡಿರುತ್ತಾರೆ.


ಸದರಿ ವರದಿಯಂತ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಹೊರಡಿಸುವುದು ಸೂಕ್ತವೆಂದು ಪರಿಗಣಿಸಿ ಭಾರತೀಯ ನ್ಯಾಯ ಸುರಕ್ಷಾ ಸಂಹಿತ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ: 02-05-2025 ರಂದು ಬೆಳಿಗ್ಗೆ 06-00 ಗಂಟೆಯಿಂದ ದಿನಾಂಕ: 06-05-2025 ರ ಬೆಳಿಗ್ಗೆ 06-00 ಗಂಟೆಯ ವರೆಗೆ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಪ್ಯಾರಿಗೊಳಿಸುವುದು ಸೂಕ್ತವೆಂದು ಪರಿಗಣಿಸಿ ಈ ಕೆಳಗಿನಂತೆ ಅದೇಶ ಹೊರಡಿಸಿರುತ್ತೇವೆ.
ಆದೇಶ ಸಂಖ್ಯೆ: ಎಂ.ಎ.ಜಿ -1/16/ಎಂ.ಜಿ.ಸಿ/2025
808: 02-05-2025.
ಶ್ರೀ ಅನುಪಮ್ ಅಗ್ರವಾಲ್, ಐ.ಪಿ.ಎಸ್., ಪೊಲೀಸ್ ಆಯುಕ್ತರು ಹಾಗೂ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿ ಮಂಗಳೂರು ನಗರ ಆದ ನಾನು ಮೇಲೆ ವಿವರಿಸಿದ ಅಂಶಗಳನ್ನು ಪರಿಗಣಿಸಿ ಭಾರತೀಯ ನ್ಯಾಯ ಸುರ ಸಂಹಿತ ಕಲಂ: 163ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಿನಾಂಕ: 02-05-2025 ರಂದು ಬೆಳಿಗ್ಗೆ 06-00 ಗಂಟೆಯಿಂದ ದಿನಾಂಕ: 06-05-2025 ರ ಬೆಳಿಗ್ಗೆ 06-00 ಗಂಟೆಯ ವರೆಗೆ ಮಂಗಳೂರು ನಗರ ಪೊಲೀಸ್‌ ಕಮೀಯವರೇಟ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ನಿಷೇಧಾಜ್ಞೆಯನ್ನು ಜ್ಯಾರಿಗೊಳಿಸಿರುತ್ತೇವೆ.
ಈ ಅವಧಿಯಲ್ಲಿ :

ಸಾರ್ವಜನಿಕವಾಗಿ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಸ್ಥೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ, ಜಾಲತಾಣಗಳ ಮೂಲಕ ಪ್ರದರ್ಶನ ಯಾ ಪ್ರಸಾರ ಮಾಡುವುದು, ಸಭ್ಯತನ ಸದಾಚಾರ, ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಕೃತ್ಯ ಎರಗುವುದು ಅಥವಾ ಕೃತ್ಯ ಎಸಗಲು ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *