ಮುಲ್ಕಿ: ಅಕ್ರಮ ಮರಳು ಅಡ್ಡೆಗೆ ಗಣಿ ಇಲಾಖೆ ಅಧಿಕಾರಿಗಳು ದಾಳಿ : ಆರೋಪಿಗಳು ಪರಾರಿ

ಮುಲ್ಕಿ: ಇಲ್ಲಿಗೆ ಸಮೀಪದ ಅತಿಕಾರಿಬೆಟ್ಟು ಬಾನೊಟ್ಟು ಶಾಂಭವಿ ನದಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ವ ಮರಳು ಅಡ್ಡೆಗೆ ಗಣಿ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು ಆರೋಪಿಗಳು ಪರಾರಿಯಾಗಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ.

ಈ ಸಂದರ್ಭ ಆರೋಪಿಗಳು ಅಕ್ರಮ ಮರಳುಗಾರಿಕೆಗೆ ಬಳಸಿದ್ದ ಮೂರು ದೋಣಿಗಳನ್ನು ಹಾಗೂ ಅಕ್ರಮವಾಗಿ ಶೇಖರಿಸಿಟ್ಟಿದ್ದ ಮರಳನ್ನು ಗಣಿ ಇಲಾಖೆಯ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಪೊಲೀಸರು ಏಕಾಏಕಿ ದಾಳಿ ನಡೆಸಿದಾಗ ಆರೋಪಿಗಳು ಸಿನಿಮೀಯ ರೀತಿಯಲ್ಲಿ ನದಿಯಲ್ಲಿ ದೋಣಿಯನ್ನು ಮುಳುಗಿಸಿಟ್ಟು ಪರಾರಿಯಾಗಿದ್ದಾರೆ.

ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಅತಿಕಾರಿಬೆಟ್ಟು, ಕರ್ನೀರೆ,ಬಳ್ಕುಂಜೆ,ಏಳಿಂಜೆ,ಪರಿಸರದಲ್ಲಿ ರಾತ್ರೋರಾತ್ರಿ ಎಗ್ಗಿಲ್ಲದೆ ಪಕ್ಷಭೇದ ಮರೆತು ಅಕ್ರಮ ಮರಳುಗಾರಿಕೆ ನಡೆಯುತ್ತಿದ್ದು ಕೂಡಲೇ ಗಣಿ ಇಲಾಖೆ ಅಧಿಕಾರಿಗಳು ಎಚ್ಚೆತ್ತು ಅಕ್ರಮವನ್ನು ನಿಲ್ಲಿಸಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ‌. ಮತ್ತು ಮಾಜಿ ಪಂಚಾಯತ್ ಅಧ್ಯಕ್ಷೆ ಮಹಿಳೆಯೊಬ್ಬರ ಬೆಂಬಲದಿಂದ ರಾಜಾರೋಷವಾಗಿ ನಡೆಯುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?