
ಬೀದರ್: ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗುರುವಾರ ಬೀದರ್ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಂಡರ್ ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ನನಗೂ ಜೀವ ಬೆದರಿಕೆ ಕರೆಗಳು ಬಂದಿವೆ ಎಂದರು.
ಪಿಎಫ್ಐ ನಿಂದ ಖಾದರ್ ರವರಿಗೆ ಜೀವ ಬೆದರಿಕೆ ಕರೆ ಬಂದಿದೆ ಎಂಬ ಅನುಪಮಾ ಶೆಣೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ನನಗಾಗಿ ಮಂಗಳೂರಿನಲ್ಲಿ ಎನ್‌ಐಎ ಸ್ಥಾಪನೆ ಮಾಡುವುದು ಬೇಡ, ಜಿಲ್ಲೆಯ ಜನಕ್ಕಾಗಿ ಮಾಡುವುದಾದರೆ ಮಾಡಲಿ. ಎಲ್ಲಿ ಹುಟ್ಟಬೇಕು? ಎಲ್ಲಿ ಸಾಯಬೇಕು? ಅದನ್ನ ದೇವರು ಬರೆದಿದ್ದಾನೆ. ನೆಮ್ಮದಿಯಾಗಿ ಸಾಯುವ ಪರಿಸ್ಥಿತಿ ದೇವರು ಮಾಡಿಕೊಡಲಿ ಎಂದು ಪ್ರಾರ್ಥನೆ ಮಾಡುತ್ತೇನೆ. ದೇವರು ಇಟ್ಟಂತೆ ಇರಲಿ, ನಮ್ಮ ಕೈಯಲ್ಲಿ ಏನು ಇಲ್ಲ ಎಂದು ಹೇಳಿದರು.


