
ಬಂಟ್ವಾಳದ ಅಬ್ದುಲ್ ರಹಿಮಾನ್ (Abdul Rahiman) ಬರ್ಬರ ಹತ್ಯೆ ಪ್ರಕರಣಕ್ಕೆ ಸದ್ಯ ಸಾಕಷ್ಟು ಚರ್ಚೆ ಮತ್ತು ಮುಸ್ಲಿಂ ಮುಖಂಡರ ಆಕ್ರೋಶಕ್ಕೆ ಕಾರಣವಾಗಿದೆ. ಸಾಮೂಹಿಕ ರಾಜೀನಾಮೆ ಕೂಡ ನೀಡಲಾಗಿದೆ. ಅಷ್ಟೇ ಅಲ್ಲದೆ ಗೃಹ ಸಚಿವ ಜಿ. ಪರಮೇಶ್ವರ್ (G. Parameshwara) ಮತ್ತು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಬದಲಾಯಿಸಲು ಪಟ್ಟು ಹಿಡಿದಿದ್ದಾರೆ. ಈ ಮಧ್ಯೆ ಪ್ರತಿಕ್ರಿಯಿಸಿರುವ ಗೃಹ ಸಚಿವ ಜಿ ಪರಮೇಶ್ವರ್, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯನ್ನು ಗಂಭೀರವಾಗಿ ಪರಿಗಣನೆ ಮಾಡಿದ್ದೇವೆ. ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕರಾವಳಿ ಭಾಗ ಅಂದರೆ ಉಡುಪಿ, ಶಿವಮೊಗ್ಗ ಮತ್ತು ಮಂಗಳೂರನ್ನು ಸೂಕ್ಷ್ಮವಾಗಿ ಪರಿಗಣಿಸಿದೆ. ಮುಲಾಜಿಲ್ಲದೆ ಕ್ರಮ ಕೈಗೊಳ್ತೀವಿ, ಆದರೆ ಯಾವ ಕ್ರಮ ಅಂತಾ ಹೇಳಲ್ಲ. ಇದನ್ನು ಹತ್ತಿಕ್ಕದೆ ಬಿಡುವುದಿಲ್ಲ ಎಂದು ಎಲ್ಲರಿಗೂ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.


