ಪತನಗೊಂಡ ವಿಮಾನದಲ್ಲಿದ್ದ ಗುಜರಾತ್​ ಮಾಜಿ ಸಿಎಂ ವಿಜಯ್​ ರೂಪಾನಿ

242 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತು ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.

ಅಹಮದಾಬಾದ್​: ಇಂದು ಮಧ್ಯಾಹ್ನ ಅಹಮದಾಬಾದ್​ನಲ್ಲಿ ಅಪಘಾತಕ್ಕೀಡಾದ ಏರ್​ ಇಂಡಿಯಾ ವಿಮಾನದಲ್ಲಿ ಗುಜರಾತ್​ನ ಮಾಜಿ ಸಿಎಂ ವಿಜಯ್​ ರೂಪಾನಿ ಅವರು ಪ್ರಯಾಣಿಸುತ್ತಿದ್ದರು ಎನ್ನುವ ಮಾಹಿತಿ ಹೊರ ಬಿದ್ದಿದೆ. ಈ ಬಗ್ಗೆ ಅಧಿಕೃತ ಮಾಹಿತಿಗಳು ಹೊರಬರಬೇಕಿದೆ ಅಷ್ಟೇ.

242 ಪ್ರಯಾಣಿಕರು ಹಾಗೂ ಸಿಬ್ಬಂದಿಯನ್ನು ಹೊತ್ತು ಲಂಡನ್​ಗೆ ತೆರಳುತ್ತಿದ್ದ ಏರ್​ ಇಂಡಿಯಾ ವಿಮಾನ ಅಹಮದಾಬಾದ್​ನ ಸರ್ದಾರ್​ ವಲ್ಲಭಬಾಯಿ ಪಟೇಲ್​ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ನಿಮಿಷಗಳಲ್ಲಿ ಸುಮಾರು ಮಧ್ಯಾಹ್ನ 2 ಗಂಟೆಗೆ ಅಪಘಾತಕ್ಕೀಡಾಗಿದೆ. ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮೇಘನಿನಗರ ಪ್ರದೇಶದಲ್ಲಿ ಪತನಗೊಂಡಿರುವುದು ಕ್ಯಾಮರಾಗಳಲ್ಲಿ ಸೆರೆಯಾಗಿದೆ.

ವಿಮಾನದ ಪ್ರಯಾಣಿಕರ ಮಾಹಿತಿಯನ್ನು ಕಲೆಹಾಕಿದ್ದು, ಅದರ ಪ್ರಕಾರ, ಗುಜರಾತ್​ನಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ರೂಪಾನಿ ಅವರು ವಿಮಾನ ಹತ್ತಿದ್ದು, ಎರಡನೇ ಸಾಲಿನಲ್ಲಿ ಕುಳಿತ್ತಿದ್ದರು ಎಂದು ತಿಳಿದು ಬಂದಿದೆ.

ತಕ್ಷಣಾ ರಕ್ಷಣಾ ಕಾರ್ಯಾಚರಣೆಗಳನ್ನು ಕೈಗೊಳ್ಳುವಂತೆ ಹಾಗೂ ಗಾಯಗೊಂಡ ಪ್ರಯಾಣಿಕರಿಗೆ ಯುದ್ಧೋಪಾದಿಯಲ್ಲಿ ಅಗತ್ಯ ಚಿಕಿತ್ಸೆ ನೀಡುವಂತೆ ಗುಜರಾತ್​ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್​ ಅವರು ಸೂಚನೆ ನೀಡಿರುವುದಾಗಿ ಸಿಎಂ ಕಚೇರಿಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ

ಘಟನೆ ಬಗ್ಗೆ ಮಾಹಿತಿ ತಿಳಿಯುತ್ತಿದ್ದಂತೆ ಸಿಎಂ, ಮುಖ್ಯ ಕಾರ್ಯದರ್ಶಿ ಮಂಕಜ್​ ಜೋಶಿ ಹಾಗೂ ಹಿರಿಯ ಕಾರ್ಯದರ್ಶಿಗಳನ್ನು ಪೋನ್​ ಮುಖಾಂತರ ಸಂಪರ್ಕಿಸಿದರು ಎಂದು ಮೂಲಗಳು ತಿಳಿಸಿವೆ. ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಚಿಕಿತ್ಸೆಗಾಗಿ ಕರೆದೊಯ್ಯಲು ಹಸಿರು ಕಾರಿಡಾರ್ ವ್ಯವಸ್ಥೆ ಮಾಡಲು ಮತ್ತು ಆಸ್ಪತ್ರೆಯಲ್ಲಿ ಎಲ್ಲಾ ಚಿಕಿತ್ಸಾ ವ್ಯವಸ್ಥೆಗಳಿಗೆ ಆದ್ಯತೆ ನೀಡಲಾಗುತ್ತಿದೆಯೇ ಎಂದು ಖಚಿತಪಡಿಸಿಕೊಳ್ಳಲು ಸಿಎಂ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ವಿಮಾನ ಅಪಘಾತ ಘಟನೆಯ ಕುರಿತು ಗುಜರಾತ್‌ನ ಮುಖ್ಯಮಂತ್ರಿ, ಗೃಹ ಸಚಿವರು ಮತ್ತು ಪೊಲೀಸ್ ಆಯುಕ್ತರೊಂದಿಗೆ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಸರ್ಕಾರ ಸಹಾಯಕ್ಕಿರುವುದಾಗಿ ಭರವಸೆ ನೀಡಿದರು.

News Editor

Learn More →

Leave a Reply

Your email address will not be published. Required fields are marked *