
ಶಿರ್ವ: ಉಡುಪಿ ಜಿಲ್ಲೆಯ ಶಿರ್ವ ಇಲ್ಲಿನ ಪೊಲೀಸ್ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಸ.ಹಿ.ಪ್ರಾ. ಶಾಲೆಯ ಬಳಿ ಕುಂತಳನಗರ-ಪಡುಬೆಳ್ಳೆ ಮಾರ್ಗವಾಗಿ ಪರವಾನಿಗೆಯಿಲ್ಲದೆ ಅಕ್ರಮವಾಗಿ ಮರಳು ಸಾಗಾಟ ಮಾಡುತ್ತಿದ್ದ ಸುಮಾರು 10 ಲಕ್ಷ ರೂ. ಮೌಲ್ಯದ ಟೆಂಪೋ ಮತ್ತು ಚಾಲಕನನ್ನು ಶಿರ್ವ ಪೊಲೀಸ್ ಉಪನಿರೀಕ್ಷಕ ಸಕ್ತಿವೇಲು ಇ. ನೇತೃತ್ವದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದು ಬಂದಿದೆ. ಟೆಂಪೋದಲ್ಲಿ ಸುಮಾರು 5 ಸಾವಿರ ರೂ. ಮೌಲ್ಯದ ಒಂದೂವರೆ ಯೂನಿಟ್ ಅಕ್ರಮ ಮರಳು ಇತ್ತು ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪೊಲೀಸರು ವಿಚಾರಣೆ ನಡೆಸಿದ್ದಾರೆ.


