ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ನಿರ್ಬಂಧ

ಶರಣ್ ಪಂಪುವೆಲ್ ಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ

ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ.

ಶರಣ್ ಪಂಪ್‌ವೆಲ್‌ ಮೇಲೆ 22ಕ್ಕೂ ಹೆಚ್ಚು ಕಾನೂನು ಪ್ರಕರಣಗಳು ದಾಖಲಾಗಿದ್ದು, ಚಿಕ್ಕಮಗಳೂರು, ಮೂಡಿಗೆರೆ, ಮತ್ತು ಆಲ್ದೂರಿನಲ್ಲಿ ಸಭೆ-ಸಮಾರಂಭಗಳನ್ನು ಆಯೋಜಿಸಿದ್ದಾರೆ.

ಕೋಮುದ್ವೇಷ ಹರಡುವ ಮತ್ತು ಪ್ರಚೋದನಾಕಾರಿ ಭಾಷಣಗಳಿಂದ ಗಲಾಟೆ ಹಾಗೂ ಗುಂಪು ಘರ್ಷಣೆಗಳಿಗೆ ಕಾರಣರಾಗಿದ್ದಾರೆ ಎಂದು ಆರೋಪಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *