ಮಂಗಳೂರು ಸಿಸಿಬಿ ಪೊಲೀಸರ ಭರ್ಜರಿ ಕಾರ್ಯಾಚರಣೆ : ಬರೋಬ್ಬರಿ 123 ಕೆಜಿ ಗಾಂಜಾ ಸಹಿತ ಕೇರಳ ಮೂಲದ ಮೂವರ ಬಂಧನ

ಮಂಗಳೂರು:ಯಶಸ್ವೀ ಕಾರ್ಯಾಚರಣೆ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಬೃಹತ್ ಪ್ರಮಾಣದ ಗಾಂಜಾ ಸಹಿತ ಮೂವರು ಕೇರಳ ಮೂಲದ ಆರೋಪಿಗಳನ್ನು ಬಂಧಿಸಿದ್ದಾರೆ. 

ಮಂಗಳೂರು ನಗರ ಸಿಸಿಬಿ ತಂಡವು ಮಾದಕ ವಸ್ತುಗಳ ಅಕ್ರಮ ಸಾಗಣೆ ವಿರುದ್ಧ ಕೈಗೊಂಡಿರುವ ಭಾಗವಾಗಿ ಖಚಿತ ಮಾಹಿತಿ ಮೇರೆಗೆ ಮೂಡಬಿದಿರೆ ತಾಲೂಕಿನ ಬೆಳುವಾಯಿ ಗ್ರಾಮದ ಕಾಂತಾವರ ಕ್ರಾಸ್ ಮಠದಕೆರೆ ಎಂಬಲ್ಲಿ ಗುರುವಾರ ನಡೆಸಿದ ಕಾರ್ಯಾಚರಣೆಯಲ್ಲಿ ಬರೋಬ್ಬರಿ 123 ಕೆಜಿ ಗಾಂಜಾ ಮತ್ತು ಅದನ್ನು ಸಾಗಾಟ ಮಾಡುತ್ತಿದ್ದ ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ವೇಳೆ ಆಂಧ್ರಪ್ರದೇಶದಿಂದ ಗಾಂಜಾ ಸಾಗಾಟ ಮಾಡುತ್ತಿದ್ದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. 

         ಬಂಧಿತ ಆರೋಪಿಗಳನ್ನು ಕೇರಳ ರಾಜ್ಯದ ಕಾಸರಗೋಡು ಜಿಲ್ಲೆಯ ಉರ್ದೂರು, ಆಡೂರು, ಮೊಗರು ಹೌಸ್ ನಿವಾಸಿ ದಿವಂಗತ ಖಾಲಿದ್ ಹಾಜಿ ಅವರ ಮಗ ಮಸೂದ್ ಎಂ ಕೆ (45), ದೇಲಂಪಾಡಿ ಪರಪ್ಪ, ಚೆಂದಮೂಲೆ ನಿವಾಸಿ ದಿವಂಗತ ಎಂ ಪಿ ಅಬ್ದುಲ್ಲ ಅವರ ಪುತ್ರ ಮೊಹಮ್ಮದ್ ಆಶಿಕ್ (24) ಹಾಗೂ  ಪರಪ್ಪ ದೇಲಂಪಾಡಿ ನಿವಾಸಿ ಇಬ್ರಾಹಿಂ ಅವರ ಪುತ್ರ ಸುಬೇರ್ (30) ಎಂದು ಹೆಸರಿಸಲಾಗಿದೆ. 

    ಬಂಧಿತ ಆರೋಪಿಗಳಿಂದ ಪೊಲೀಸರು 123 ಕೆಜಿ ಗಾಂಜಾ, ಎರಡು ವಾಹನಗಳು, ಹಾಗೂ 5 ಮೊಬೈಲ್ ಪೊನ್ ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 46.20 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ಮೂಡಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಮಂಗಳೂರು ನಗರ ಪೊಲೀಸರಿಂದ ನಿರಂತರವಾಗಿ ಮಾದಕ ವಸ್ತುಗಳ ವಿರುದ್ಧದ ಕಾರ್ಯಾಚರಣೆ ಮುಂದುವರೆದಿದ್ದು, ಬೃಹತ್ ಗಾಂಜಾ ಮಾರಾಟ/ ಸಾಗಾಟ ಜಾಲದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಸಿಬಿ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

News Editor

Learn More →

Leave a Reply

Your email address will not be published. Required fields are marked *