ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ…

ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ.

ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ.

ವಂದೇ ಭಾರತ್ ರೈಲುಗಳು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಮತ್ತು ಅಮೃತಸರ-ಶ್ರೀ ಮಾತಾ ವೈಷ್ಣೋ ದೇವಿ ಕತ್ರಾ ನಡುವೆ ಕಾರ್ಯನಿರ್ವಹಿಸಲಿವೆ. ಮೋದಿ ಆಗಮಿಸಲಿದ್ದು, ಹಳದಿ ಮೆಟ್ರೋ ರೈಲು ಸಂಚಾರ ಹಾಗೂ ಬೆಳಗಾವಿ-ಬೆಂಗಳೂರು-ಬೆಳಗಾವಿ ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಹಸಿರು ನಿಶಾನೆ ತೋರಲಿದ್ದಾರೆ.

ಬೆಂಗಳೂರಿನ ಪ್ರಮುಖ ನಗರಗಳಾದ ಸೌತ್ ಎಂಡ್ ಸರ್ಕಲ್, ರಾಗಿಗುಡ್ಡ, ಎಲೆಕ್ಟ್ರಾನಿಕ್ ಸಿಟಿ ಸೇರಿದಂತೆ ಹಲವು ಕಡೆ ಪ್ರಧಾನಿ ಮೋದಿಗೆ ಸ್ವಾಗತ ಕೋರಲು ಬಿಜೆಪಿ ಸಜ್ಜಾಗಿದೆ.

News Editor

Learn More →

Leave a Reply

Your email address will not be published. Required fields are marked *