ಗದಗ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಹಟ್ಟಿ ಡೆತ್ನೋಟ್ ಬರೆದು ಆತ್ಮಹತ್ಯೆಗೆ ಶರಣು!

ಗದಗ: ಮರಳು ದಂಧೆಗೆ ಕಾಂಗ್ರೆಸ್ ಮುಖಂಡ ಡಾ. ಶಶಿಧರ್ ಹಟ್ಟಿ ಬಲಿಯಾಗಿದ್ದಾರೆ.
ಗದಗ ಜಿಲ್ಲೆ ರೋಣ ತಾಲೂಕಿನ ಹಿರೇಹಾಳ ಗ್ರಾಮದಲ್ಲಿ ಶಶಿಧರ್ ಡೆತ್ನೋಟ್ ಬರೆದಿಟ್ಟು ಸೋಮವಾರ ರಾತ್ರಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಅವರು ಲುಂಗಿಯಿಂದ ನೇಣು ಬಿಗಿದುಕೊಂಡು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅದಕ್ಕೂ ಮುನ್ನ ಮರಳು ದಂಧೆಕೋರ, ಕಾಂಗ್ರೆಸ್ ಮುಖಂಡ ಶರಣಗೌಡ ಪಾಟೀಲ್ ಹೆಸರನ್ನು ಡೆತ್ನೋಟ್ನಲ್ಲಿ ಉಲ್ಲೇಖಿಸಿದ್ದಾರೆ.

ಎಲ್ಲಾ ಲೆಕ್ಕ ಕೊಟ್ಟರೂ ಶರಣಗೌಡ ಪದೇಪದೇ ಕಿರುಕುಳ ನೀಡುತ್ತಿದ್ದಾರೆ. ಹೀಗಾಗಿ ಮನನೋಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ಉಸ್ತುವಾರಿ ಸಚಿವ ಹೆಚ್ಕೆ ಪಾಟೀಲರಿಗೆ ಹೇಳಿ ಶರಣಗೌಡಗೆ ಕಠಿಣ ಶಿಕ್ಷೆ ಕೊಡಿಸಿ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.

ರೋಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ರೋಣ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *