
ಕೋಲಾರ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಗಲಾಟೆ-ಗದ್ದಲ ನಡೆದಿದೆ. ಕಚೇರಿಯಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ರಮೇಶ್ ಕುಮಾರ್, ಕೊತ್ತೂರು ಮಂಜುನಾಥ್, ನಸೀರ್ ಅಹ್ಮದ್ ಫೋಟೋ ಇಲ್ಲದ ಹಿನ್ನೆಲೆ ಗಲಾಟೆ ನಡೆದಿದ್ದು ಕಾರ್ಯಕರ್ತರು ಮತ್ತು ಮುಖಂಡರ ಮಧ್ಯೆ ಹೊಡೆದಾಟ ನಡೆದಿದೆ. ಶಾಸಕ ಕೊತ್ತೂರು ಮಂಜುನಾಥ್ ಬೆಂಬಲಿಗರು ಮತ್ತು ಕೆ. ಹೆಚ್ ಮುನಿಯಪ್ಪ ಬೆಂಬಲಿಗರ ನಡುವೆ ಮಾರಾಮಾರಿಯಾಗಿದೆ.


