ಬೆಳುವಾಯಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸಂದೀಪ್‌ ಚಿಕಿತ್ಸೆ ಫಲಿಸದೆ ಸಾವು

ಮೂಡುಬಿದಿರೆ: ಕಾರ್ಕಳದ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಕಾರೊಂದು ರಸ್ತೆ ವಿಭಾಜಕಕ್ಕೆ ಬಡಿದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೀಪ್‌ ಸಿದ್ದಕಟ್ಟೆ (25) ಅವರು ಆ. 24ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

ಸಂದೀಪ್‌ ಅವರು ಬಂಟ್ವಾಳದ ಸಿದ್ಧಕಟ್ಟೆಯ ನಿವಾಸಿಯಾಗಿದ್ದು, ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್ 16 ರ ಸಂಜೆ ಸಂದೀಪ್ ಹಾಗೂ ಅವರ ಮೂವರು ಸ್ನೇಹಿತರು ಕಾರಿನಲ್ಲಿ ಮೂಡುಬಿದಿರೆ-ಕಾರ್ಕಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದಾಗ ಬೆಳುವಾಯಿ ಬಳಿ ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದಿತ್ತು. ಈ ವೇಳೆ ಮಂಗಳೂರಿನ ಹೊಟೇಲೊಂದರ ಕಾರ್ಮಿಕ ವೇಣೂರು ಪೆರ್ಮುಡೆ ನಿವಾಸಿ ಸುಮಿತ್‌ ಮೃತಪಟ್ಟಿದ್ದರು.

ಅಪಘಾತದಲ್ಲಿ ಸಂದೀಪ್‌ ಸೇರಿದಂತೆ ನಾಲ್ವರು ಗಂಭೀರ ಗಾಯಗೊಂಡಿದ್ದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಂದೀಪ್‌ ಮೃತಪಟ್ಟಿದ್ದಾರೆ.

News Editor

Learn More →

Leave a Reply

Your email address will not be published. Required fields are marked *