ಮಡಿಕೇರಿ : ಕುಡಿದ ಮತ್ತಿನಲ್ಲಿ 2 ವರ್ಷದ ಮಗುವಿನ ಮೇಲೆ ಅತ್ಯಾಚಾರ,ಕಾಮುಕನ ಬಂಧನ.

ಮಡಿಕೇರಿ : ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅಲ್ಲಲ್ಲಿ ಸದ್ದು ಮಾಡುತ್ತಿದ್ದು ಕರ್ನಾಟಕ ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ, ಕೊಡಗಿನಲ್ಲಿ 2 ವರ್ಷದ ಮಗುವಿನ ಮೇಲೆ ಕಾಮುಕನೊಬ್ಬ ಅತ್ಯಾಚಾರ ಎಸಗಿರುವ ಘಟನೆ ವರದಿಯಾಗಿದೆ.

ಎರಡು ವರ್ಷದ ಮಗುವಿನ ಮೇಲೆ 45 ವರ್ಷದ ಕಾಮುಕ ಮಣಿ ಎಂಬಾತ ಅತ್ಯಾಚಾರ ಎಸಗಿದ್ದು ಕೊಡಗು ಜಿಲ್ಲೆಯ ಸಿದ್ದಾಪುರ ಪೊಲೀಸ್‌ ಠಾಣಾ ವ್ಯಾಪ್ತಿಯ ಎಸ್ಟೇಟ್ನಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ.
ಕುಡಿದ ಮತ್ತಿನಲ್ಲಿ ಕಾಮುಕ ಮಗುವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಸದ್ಯ ಮಗುವನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

News Editor

Learn More →

Leave a Reply

Your email address will not be published. Required fields are marked *