
ಪ್ರತಿಷ್ಠಿತ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ, ತನ್ನ ಸಂಘಟಿತ ನಾಯಕತ್ವದ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರಣಕರ್ತರಾದ, ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ತಿನ ನಿಕಟ ಪೂರ್ವ ಸದಸ್ಯರಾದ ಹರೀಶ್ ಕುಮಾರ್ ರವರನ್ನು, ದಿನಾಂಕ 24.08.2025ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದಾಯಿಸಲಾಯಿತು.
ಈ ಸಂದರ್ಭದಲ್ಲಿ ಕಡಬ ಬ್ಲಾಕ್ ಕಾಂಗ್ರೆಸಿನ ಹಿರಿಯ ನಾಯಕರು, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯರಾದ ಪಿಪಿ ವರ್ಗೀಸ್, ಕಡಬ ಪಟ್ಟಣ ಪಂಚಾಯತ್ ಉಸ್ತುವಾರಿಗಳಾದ ಶ್ರೀ ಸುಭಾಷ್ ಚಂದ್ರ ಶೆಟ್ಟಿ ಕುಲಾಲು, ನ್ಯಾಯವಾದಿ ಶ್ರೀ ನೂರುದ್ದೀನ್ ಸಾಲ್ಮರ, ದ.ಕ ಜಿಲ್ಲಾ ಯುವ ಕಾಂಗ್ರೆಸ್ಸಿನ ನಿಕಟಪೂರ್ವ ಅಧ್ಯಕ್ಷರಾದ ಲುಕ್ಮಾನ್ ಬಂಟ್ವಾಳ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ನ ಶ್ರೀ ಅಬ್ಬಾಸ್ ಅಲಿ, ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶ್ರೀ ಅಬ್ದುಲ್ ರಹಿಮಾನ್ ಆಜಾದ್ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀ ವಿ.ಕೆ ಶರೀಫ್ ಬಪ್ಪಳಿಗೆ ಉಪಸ್ಥಿತರಿದ್ದರು.


