ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುತ್ತೂರು ಇದರ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಇಂದಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆರಂಭಗೊಂಡಿದೆ. ಬೆಳಿಗ್ಗೆ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರಿಂದ ಗಣಪತಿ ವಿಗ್ರಹದ ಪ್ರತಿಷ್ಠಾಪಣೆ ನಡೆಯಿತು. ಬಳಿಕ ಗಣಪತಿ ಹೋಮ ಹಾಗೂ ಸಾವಿರಾರು ಭಕ್ತರಿಗೆ ಅನ್ನಸಂತರ್ಪಣೆ ನೆರವೇರಿತು. ಈ ಸಂದರ್ಭದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುಜೀಂದ್ರ ಪ್ರಭು, ಗೌರವಾಧ್ಯಕ್ಷರಾದ ಎಂ.ಕೆ. ಪ್ರಸಾದ್ ಭಂಡಾರಿ, ರವೀಂದ್ರ ಶೆಟ್ಟಿ ನುಳಿಯಾಲು, ಕಾರ್ಯಾಧ್ಯಕ್ಷರಾದ ರಾಧಕೃಷ್ಣ ನಂದಿಲ, ಪ್ರಧಾನ ಕಾರ್ಯದರ್ಶಿ ಅಶೋಕ್ ಕುಂಬ್ಳೆ, ಜೊತೆ ಕಾರ್ಯದರ್ಶಿ ನೀಲಂತ್ ಕುಮಾರ್, ಕೋಶಾಧಿಕಾರಿ ಶ್ರೀನಿವಾಸ್ ಮೂಲ್ಯ, ಉಪಾಧ್ಯಕ್ಷರಾದ ವಿಶ್ವನಾಥ ಗೌಡ ಬನ್ನೂರು, ಸತೀಶ್ ನಾಯ್ಕ್ ಪರ್ಲಡ್ಕ, ಸುಧೀರ್ ಶೆಟ್ಟಿ ತೆಂಕಿಲ, ಸಹಜ್ ರೈ ಬಳಜ್ಜ ಹಾಗೂ ಸರ್ವ ಸದಸ್ಯರು ಉಪಸ್ಥಿತರಿದ್ದರು. ಇಂದಿನಿಂದ ನಾಲ್ಕು ದಿನಗಳ ಕಾಲ ದೇವರ ಆರಾಧನೆ ನಡೆಯಲಿದ್ದು, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದೆ. ಇದೇ 30ರಂದು ಸಂಜೆ 5 ಗಂಟೆಗೆ ಸರಿಯಾಗಿ ಗಣೇಶನ ವೈಭವದ ಶೋಭಾಯಾತ್ರೆ ವಿವಿಧ ಸ್ತಬ್ಧಚಿತ್ರಗಳ ಪ್ರದರ್ಶನದೊಂದಿಗೆ ಕೊನೆಗೊಳ್ಳಲಿದೆ.

News Editor

Learn More →

Leave a Reply

Your email address will not be published. Required fields are marked *