ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿಯನ್ನು ಕಾರ್ಕಳಕ್ಕೆ ಕರೆ ತಂದ ಪೊಲೀಸರು : ಸ್ಥಳ ಮಹಜರು

ಮೋಸ್ಟ್ ವಾಂಟೆಡ್‌ ನಕ್ಸಲೈಟ್ ಶ್ರೀಮತಿ ಅಲಿಯಾಸ್ ಉನ್ನಿಮಾಯಳನ್ನು ಪೊಲೀಸರು ಕಾರ್ಕಳಕ್ಕೆ ಕರೆ ತಂದಿದ್ದಾರೆ.

2011 ಡಿಸೆಂಬರ್ 19 ರಂದು ಪೊಲೀಸ್ ಮಾಹಿತಿದಾರ ಮಲೆಕುಡಿಯ ಜನಾಂಗದ ಸದಾಶಿವ ಗೌಡನ ಅಪಹರಣ, ಹತ್ಯೆ ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡಲು ಶ್ರೀಮತಿಯನ್ನು ಪೊಲೀಸರು ಕಾರ್ಕಳಕ್ಕೆ ಕರೆತರಲಾಗಿದೆ.

ಹಲವು ವರ್ಷಗಳಿಂದ ಕರ್ನಾಟಕ ಮತ್ತು ಕೇರಳ ರಾಜ್ಯದ ಪೊಲೀಸರಿಂದ ತಲೆಮರೆಸಿಕೊಂಡು ಓಡಾಡುತ್ತಿದ್ದ ನಕ್ಸಲ್ ನಾಯಕಿ ಮೂಲತಃ ಶೃಂಗೇರಿ ನಿವಾಸಿ ಶ್ರೀಮತಿ (ಉಣ್ಣಿಮಾಯಾ) (28) ಕಳೆದ ನವೆಂಬರ್ 7 ರಂದು ಕೇರಳ ಪೊಲೀಸರಿಗೆ ಸೆರೆಸಿಕ್ಕಿದ್ದು. ನಂತರ ಈಕೆ ಕೇರಳ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದಳು. ಈಕೆ ಕೇರಳದ ವಯನಾಡು ಜಿಲ್ಲೆಯಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಸೆರೆಯಾಗಿದ್ದಳು.

ಮೂಲತಃ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ತಾಲೂಕಿನ ಬೆಳಗೋಡುಕೊಡಿಗೆ ನಿವಾಸಿಯಾಗಿರುವ ಶ್ರೀಮತಿ ಕೇರಳ-ಕರ್ನಾಟಕ ಗಡಿಭಾಗದಲ್ಲಿ ಆ್ಯಕ್ಟಿವ್ ಆಗಿದ್ದಳು. ಸದಾಶಿವ ಗೌಡ ಹತ್ಯೆ ನಡೆಸಿದ ಕಾರ್ಕಳ ವ್ಯಾಪ್ತಿಯ ಕಬ್ಬಿನಾಲೆಗೆ ಬಾಡಿ ವಾರೆಂಟ್ ಮೇಲೆ ಶ್ರೀಮತಿಯನ್ನು ಪೊಲೀಸರು ಕರೆದುಕೊಂಡು ಬಂದಿದ್ದಾರೆ. ಶ್ರೀಮತಿ ಕರೆ ತಂದು ಘಟನಾ ಸ್ಥಳದಲ್ಲಿ ಮಹಜರು ನಡೆಸಿದ್ದಾರೆ. ಶ್ರೀಮತಿ ಮೇಲೆ ರಾಜ್ಯದ ಹಲವು ಠಾಣೆಗಳಲ್ಲಿ 9 ಪ್ರಕರಣಗಳಿವೆ

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಪಿ.ಎ.(P.A) ಆಗಿ ಸಂಬಂಧಿಕರ ನೇಮಕ: ಸಾರ್ವಜನಿಕ ಸೇವೆಯಾ ಅಥವಾ ಪ್ರಭಾವದ ದ್ವಾರವೇ?