ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: ಚಿನ್ನಯ್ಯನ್ನು A-1 ಆರೋಪಿಯನ್ನಾಗಿಸಿ ಎಸ್‌ಐಟಿಯಿಂದ 10 ಸೆಕ್ಷನ್‌ ಗಳಡಿ ಕೇಸ್ ?

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪದ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಹಿಂದೆ ಅನಾಮಿಕ ದೂರುದಾರನಾಗಿ ಗುರುತಿಸಿಕೊಂಡಿದ್ದ ಚಿನ್ನಯ್ಯ ಎಂಬ ವ್ಯಕ್ತಿಯನ್ನೇ ವಿಶೇಷ ತನಿಖಾ ದಳ (ಎಸ್ಐಟಿ) ಪ್ರಥಮ ಆರೋಪಿ (A-1) ಯನ್ನಾಗಿ ಮಾಡಿ, ಹತ್ತು ಹೊಸ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಎಸ್‌ ಐಟಿ ಮೂಲಗಳಿಂದ ತಿಳಿದು ಬಂದಿದೆ.

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪದ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಹಿಂದೆ ಅನಾಮಿಕ ದೂರುದಾರನಾಗಿ ಗುರುತಿಸಿಕೊಂಡಿದ್ದ ಚಿನ್ನಯ್ಯ ಎಂಬ ವ್ಯಕ್ತಿಯನ್ನೇ ವಿಶೇಷ ತನಿಖಾ ದಳ (ಎಸ್ಐಟಿ) ಪ್ರಥಮ ಆರೋಪಿ (A-1) ಯನ್ನಾಗಿ ಮಾಡಿ, ಹತ್ತು ಹೊಸ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದೆ ಎಂದು ಎಸ್‌ ಐಟಿ ಮೂಲಗಳಿಂದ ತಿಳಿದು ಬಂದಿದೆ.

ನೂರಾರು ಶವಗಳನ್ನು ಹೂತುಹಾಕಲಾಗಿದೆ ಎಂದು ಚಿನ್ನಯ್ಯ ನೀಡಿದ್ದ ಹೇಳಿಕೆಯ ಆಧಾರದ ಮೇಲೆ, ಎಸ್ಐಟಿ ತಂಡವು ಧರ್ಮಸ್ಥಳದ ಕಾಡು ಪ್ರದೇಶಗಳಲ್ಲಿ ವ್ಯಾಪಕ ಉತ್ಖನನ ನಡೆಸಿತ್ತು. ಆದರೆ, ಯಾವುದೇ ಶವಗಳು ಪತ್ತೆಯಾಗಿರಲಿಲ್ಲ. ಈ ಬೆಳವಣಿಗೆಯ ಬೆನ್ನಲ್ಲೇ, ಎಸ್ಐಟಿ ಚಿನ್ನಯ್ಯನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

ಚಿನ್ನಯ್ಯ ವಿರುದ್ಧ 10 ಹೊಸ BNS ಸೆಕ್ಷನ್ಗಳು
ಪ್ರಕರಣದ ಹಿಂದಿನ ಸೆಕ್ಷನ್ಗಳನ್ನು ಕೈಬಿಟ್ಟಿರುವ ಎಸ್ಐಟಿ, ನ್ಯಾಯಾಲಯದ ಅನುಮತಿ ಪಡೆದು ಚಿನ್ನಯ್ಯ ವಿರುದ್ಧ ಹೊಸದಾಗಿ 10 BNS ಸೆಕ್ಷನ್ಗಳ ಅಡಿಯಲ್ಲಿ ತನಿಖೆ ನಡೆಸಲು ನಿರ್ಧರಿಸಿದೆ. ಈ ಪ್ರಕರಣದಲ್ಲಿ ದೂರುದಾರನಾಗಿದ್ದ ಚಿನ್ನಯ್ಯನನ್ನೇ ಈಗ A-1 ಆರೋಪಿಯನ್ನಾಗಿ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಮೂಲಗಳಿಂದ ದೊರೆತ ಮಾಹಿತಿಗಳ ಪ್ರಕಾರ ಎಸ್ಐಟಿ ದಾಖಲಿಸಿರುವ ಸೆಕ್ಷನ್ಗಳ ಪಟ್ಟಿ ಹೀಗಿದೆ: BNS 336 (ಸುಳ್ಳು ಮಾಹಿತಿ ನೀಡಿ ಸಾರ್ವಜನಿಕರನ್ನು ಭಯಭೀತಗೊಳಿಸುವುದು), 230 (ಸಾರ್ವಜನಿಕ ಸೇವಕರಿಗೆ ತಪ್ಪು ಮಾಹಿತಿ ನೀಡುವುದು), 231 (ನ್ಯಾಯಾಲಯದ ಕಾರ್ಯಕ್ಕೆ ಅಡ್ಡಿಪಡಿಸುವುದು), 229 (ಸುಳ್ಳು ಸಾಕ್ಷ್ಯ ನೀಡುವುದು), 227 (ಸಾರ್ವಜನಿಕ ಶಾಂತಿ ಕದಡುವುದು), 228 (ನ್ಯಾಯಾಲಯಕ್ಕೆ ಅಪಮಾನ ಮಾಡುವುದು), 240 (ತಪ್ಪು ಮಾಹಿತಿ ನೀಡಿ ತನಿಖೆ ದಿಕ್ಕು ತಪ್ಪಿಸುವುದು), 236 (ಪಿತೂರಿ), 233 (ತಪ್ಪಾಗಿ ಜನರನ್ನು ಪ್ರೇರೇಪಿಸುವುದು) ಮತ್ತು 248 (ಸುಳ್ಳು ದೂರು ನೀಡಿ ಸಮಯ ಹಾಳುಮಾಡುವುದು) ಸೆಕ್ಷನ್ಗಳ ಅಡಿಯಲ್ಲಿ ದೂರು

ಈ ಹೊಸ ಬೆಳವಣಿಗೆಯು ಧರ್ಮಸ್ಥಳ ಪ್ರಕರಣಕ್ಕೆ ಹೊಸ ಆಯಾಮ ನೀಡಿದ್ದು, ಮುಂದಿನ ದಿನಗಳಲ್ಲಿ ತನಿಖೆ ಯಾವ ದಿಕ್ಕಿನಲ್ಲಿ ಸಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”