ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಇಂದು ಮಹೇಶ್ ಶೆಟ್ಟಿ ತಿಮರೋಡಿಯ ವಿಚಾರಣೆ

ಬೆಳ್ತಂಗಡಿ: ಯೂಟ್ಯೂಬ್ ಚಾನೆಲ್ ವೊಂದರಲ್ಲಿ ಬಿಜೆಪಿ ನಾಯಕ ಬಿ ಎಲ್ ಸಂತೋಷ್ ಬಗ್ಗೆ ಅವ್ಯಾಚ ಶಬ್ದಗಳಿಂದ ಮಾತನಾಡಿದ ಬಗ್ಗೆ ಉಡುಪಿ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣದಲ್ಲಿ ಆ.21 ರಂದು ಮಹೇಶ್ ಶೆಟ್ಟಿ ತಿಮರೋಡಿಯ ಉಜಿರೆ ನಿವಾಸದಿಂದ ಬ್ರಹ್ಮಾವರ ಪೊಲೀಸರು ಬಂಧಿಸಲು ತೆರಳಿದಾಗ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಬ್ರಹ್ಮಾವರ ಪೊಲೀಸರು ಆ.22 ರಂದು ಪ್ರಕರಣ ದಾಖಲಿಸಿದ್ದರು.ಈ ಪ್ರಕರಣದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಎ3 ಆರೋಪಿ ಆಗಿದ್ದರು. ಇದರ ವಿಚಾರಣೆಗಾಗಿ ಮಹೇಶ್ ಶೆಟ್ಟಿ ತಿಮರೋಡಿ ಇಂದು ಬೆಳಗ್ಗೆ 11:20 ಕ್ಕೆ ವಿಚಾರಣೆಗಾಗಿ ಬೆಳ್ತಂಗಡಿ ಪೊಲೀಸ್ ಠಾಣೆಗೆ ಹಾಜರಾಗಿದ್ದಾರೆ.

News Editor

Learn More →

Leave a Reply

Your email address will not be published. Required fields are marked *