ನೆತ್ತರೆಕೆರೆ ತುಳು ಚಲನ ಚಿತ್ರ ಬಿಡುಗಡೆ

ಪುತ್ತೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ, ಸ್ವರಾಜ್ ಶೆಟ್ಟಿ ನಿರ್ದೇಶನದಲ್ಲಿ ಲಂಚುಲಾಲ್ ಕೆ.ಎಸ್. ನಿರ್ಮಾಣದ ತುಳು ಚಲನ ಚಿತ್ರ ‘ನೆತ್ತರೆ ಕೆರೆ’ ಆ.29ರಂದು ಬಿಡುಗಡೆಗೊಂಡಿತು.

ದೀಪ ಬೆಳಗಿಸಿ ಉದ್ಘಾಟಿಸಿದ ಹಿಂದು ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲ ಮಾತನಾಡಿ, ತುಳು ಚಲನ ಚಿತ್ರಗಳ ಮುಖಾಂತರ ತುಳು ಭಾಷೆ, ಸಂಸ್ಕೃತಿಯನ್ನು ಉಳಿಸುವ ಕಾರ್ಯವಾಗುತ್ತಿದೆ. ಹೀಗಾಗಿ ತುಳು ಚಲನ ಚಿತ್ರಗಳಿಗೆ ಸಹಕಾರ, ಪ್ರೋತ್ಸಾಹ ನೀಡಬೇಕು. ಸ್ವರಾಜ್ ಶೆಟ್ಟಿಯವರ ತುಳು ಚಿತ್ರ ಬಿಡುಗಡೆಗೊಳ್ಳುತ್ತಿದ್ದು ಉಡುಪಿ ಮತ್ತು ದ.ಕ ಜಿಲ್ಲೆಯ ತುಳುವರು ವೀಕ್ಷಣೆ ಮಾಡುವ ಮುಖಾಂತರ ಕಲಾವಿದರ ಭವಿಷ್ಯ ಉಜ್ವಲವಾಗಲಿದೆ. ತುಳುವಿನ ಮೇಲಿನ ಗೌರವದಿಂದ ಚಿತ್ರ ವೀಕ್ಷಣೆ ಮಾಡಿ ಇನ್ನಷ್ಟು ಮಂದಿಗೆ ಪ್ರೇರಣೆ ನೀಡಬೇಕು ಎಂದರು.

ಅಕ್ಷಯ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಜಯಂತ ನಡುಬೈಲು ಮಾತನಾಡಿ, ತುಳುವಿನಲ್ಲಿ ಹಲವು ಚಿತ್ರಗಳು ಬರುತ್ತಿದೆ. ನಮ್ಮದೇ ಊರಿನ ಕಲಾವಿದರು ಅಭಿನಯಿಸಿರುವ ಚಿತ್ರಗಳು ತುಳು ಚಿತ್ರ ತಂಡದಲ್ಲಿರುವುದು ನಮಗೆ ಹೆಮ್ಮೆ. ಈ ಚಿತ್ರವು ನೂರು ದಿನ ಪ್ರದರ್ಶನ ಕಂಡ ಚಿತ್ರಗಳ ಸಾಲಿಗೆ ಸೇರ್ಪಡೆಗೊಳ್ಳಲಿ ಎಂದರು.

ಉದ್ಯಮಿ ಸಹಜ್ ರೈ ಬಳೆಜ್ಜ,
ಸಂಪ್ಯ ಉದಯಗಿರಿ ವಿಷ್ಣುಮೂರ್ತಿ ಒತ್ತೆಕೋಲ ಸಮಿತಿಯ ಗೌರವಾಧ್ಯಕ್ಷ ಮಂಜಪ್ಪ ರೈ ಬಾರಿಕೆ, ರಾಷ್ಟ್ರಪ್ರಶಸ್ತಿ ವಿಜೇತ ಮುಖ್ಯಶಿಕ್ಷಕ ನಾರಾಯಣ ರೈ ಕುಕ್ಕುವಳ್ಳಿ, ಮೂಕಾಂಬಿಕ ಕಲ್ಬರಲ್ ಅಕಾಡೆಮಿಯ ನೃತ್ಯಗುರು ದೀಪಕ್ ಕುಮಾರ್, ದಯಾನಂದ ರೈ ಬೆಟ್ಟಂಪಾಡಿ, ಸ್ಕೂಲ್ ಲೀಡರ್ ರಝಾಕ್, ಚಿತ್ರದ ನಟಿ ಭವ್ಯ ಪೂಜಾರಿ, ಭಾರತ್ ಸಿನೇಮಾಸ್‌ನ ವ್ಯವಸ್ಥಾಪಕ ಜಯರಾಮ ವಿಟ್ಲ,ಚಲನಚಿತ್ರ ವಿತರಕ ಬಾಲಕೃಷ್ಣ ರೈ ಕುಕ್ಕಾಡಿ,ಪದ್ಮರಾಜ್‌ ಪುತ್ತೂರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”