ಕಾಲೇಜುಗಳಿಗೆ ನಿಷೇದಿತ ಮಾದಕವಸ್ತು ಸರಬರಾಜು – ಕೇರಳದ ವ್ಯಕ್ತಿ ಸೆರೆ

ಮಂಗಳೂರು: ಪ್ರತಿಷ್ಠಿತ ಕಾಲೇಜುಗಳಿಗೆ ನಿಷೇದಿತ ಮಾದಕವಸ್ತುವನ್ನು ಸರಬರಾಜು ಮಾಡುತ್ತಿದ್ದ ಓರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿದ್ದಾರೆ.

ಆರೋಪಿ ಮೊಹಮ್ಮದ್ ಅರ್ಷದ್ ಖಾನ್ (29) ಎಂದು ಗುರುತಿಸಲಾಗಿದ್ದು, ಕೇರಳದ ಎರ್ನಾಕುಲಂ ಜಿಲ್ಲೆಯ ಕೊಚ್ಚಿಯ ಮಟ್ಟಂಚೇರಿಯ ಮೌಲಾನಾ ಆಜಾದ್ ರಸ್ತೆಯವನಾಗಿದ್ದು, ಮಂಗಳೂರಿನ ದೇರಳಕಟ್ಟೆಯಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ವಾಸಿಸುತ್ತಿದ್ದ.

ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಬೆಂಗಳೂರಿನಿಂದ ಖರೀದಿಸಿಕೊಂಡು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ಮಾದಕವಸ್ತು ಎಮ್.ಡಿ.ಎಂ.ಎ, ಹೈಡ್ರೋವಿಡ್ ಗಾಂಜಾ ಮತ್ತು ಎಮ್.ಡಿ.ಎಂ.ಎ ಪಿಲ್ಸ್ ಅನ್ನು ಸರಬರಾಜು ಮಾಡುತ್ತಿದ್ದ ಆರೋಪಿ. ಸುಮಾರು 53.29 ಗ್ರಾಂ ಎಂಡಿಎಂಎ ಮತ್ತು 2.33 ಗ್ರಾಂ ಹೈಡ್ರೋವೀಡ್ ಗಾಂಜಾ ಮತ್ತು 0.45 ಗ್ರಾಂ MDMA PILLS ಅನ್ನು ವಶಪಡಿಸಿಕೊಳ್ಳಲಾಗಿದೆ.

ಮಂಗಳೂರು ನಗರಕ್ಕೆ ಬೆಂಗಳೂರು ನಗರದಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿ ಅದನ್ನು ಮಂಗಳೂರು ನಗರದ ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳಿಗೆ ದೇರಳಕಟ್ಟೆಯ ಪರಿಸರದಲ್ಲಿ ನಿಂತುಕೊಂಡು ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯನ್ನು ಪಡೆದ ಮಂಗಳೂರು ಸಿಸಿಬಿ ಪೊಲೀಸರು ಆ.29 ರಂದು ಮಾದಕ ವಸ್ತುವನ್ನು ಪತ್ತೆ ಹಚ್ಚಲಾಯಿತು.

ಆತನ ವಶದಿಂದ 10.85,000 ರೂ. ಮೌಲ್ಯದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ, ಹೈಡ್ರೋವಿಡ್ ಗಾಂಜಾ, MDMA PILLS ಮತ್ತು ಡಿಜಿಟಲ್ ತೂಕ ಮಾಪನ, ಮೊಬೈಲ್ ಫೋನ್, ಸಹಿತ ಒಟ್ಟು . 11,05,500 ರೂ ಮೌಲ್ಯದ ಸೊತ್ತುಗಳನ್ನು ಸ್ವಾಧೀನಪಡಿಸಿಕೊಳ್ಳಲಾಗಿದೆ.

ಈ ಬಗ್ಗೆ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಮಾದಕವಸ್ತು ಮಾರಾಟ/ಸಾಗಾಟ ಜಾಲದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ. ಈ ಮಾದಕ ವಸ್ತು ಎಂಡಿಎಂಎ ಮಾರಾಟ/ಸಾಗಾಟದ ಪತ್ತೆ ಕಾರ್ಯದಲ್ಲಿ ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿಗಳು ಭಾಗವಹಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”