ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವವವರಿಗೆ ರಾಜ್ಯ ಪೊಲೀಸರಿಂದ ಎಚ್ಚರಿಕೆ

ಬೆಂಗಳೂರು: ಸೋಶಿಯಲ್ ಮೀಡಿಯಾಗಳಲ್ಲಿ ಮನಸೋ ಇಚ್ಚೆ ಪೋಸ್ಟ್, ಕಾಮೆಂಟ್ ಮಾಡುವುದನ್ನು ಕರ್ನಾಟಕ ರಾಜ್ಯ ಪೊಲೀಸರು ಗಂಭೀರವಾಗಿ ಪರಿಗಣಿಸಿದ್ದಾರೆ. ಸಾರ್ವಜನಿಕ ಶಾಂತಿ ಸುವ್ಯವಸ್ಥೆಗೆ ಭಂಗ ತರುವ ಪೋಸ್ಟ್, ಕಾಮೆಂಟ್ ಪ್ರಕಟಿಸುವವರ ವಿರುದ್ಧ ಇನ್ನುಮುಂದೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುವುದಾಗಿ ಪೊಲೀಸರು ಕಠಿಣ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಪೊಲೀಸ್ ಇಲಾಖೆಯ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಿಂದ ಸಂದೇಶ ನೀಡಿರುವ ಪೊಲೀಸರು, ಇನ್ನುಮುಂದೆ ಯಾವುದೇ ವ್ಯಕ್ತಿ, ಸಂಘಟನೆ ಅಥವಾ ಸಂಸ್ಥೆಯ ವಿರುದ್ಧ ಅವಹೇಳನಕಾರಿ ಪೋಸ್ಟ್ ಅಥವಾ ಕಾಮೆಂಟ್ ಮಡುವ ಮೂಲಕ ಸಾರ್ವಜನಿಕ ಶಾಂತಿಭಂಗ, ಕಾನೂನು ಸುವ್ಯವಸ್ಥೆಗೆ ತೊಡಕುಂಟು ಮಾಡಿದರೆ ಕಾನೂನಾತ್ಮಕ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ ಯಾವುದೇ ಬಳಕೆದಾರರಿಂದ ಅಂಥಹ ಚಟುವಟಿಕೆಗಳು ಪುನರಾವರ್ತನೆಯಾದರೆ ಕಠಿಣ ಕ್ರಮಕ್ಕೆ ದಾರಿಯಾಗಬಹುದು. ಜಾಗರೂಕರಾಗಿರಿ ಎಂದು ಎಚ್ಚರಿಕೆ ನೀಡಿರುವ ಪೊಲೀಸರು, ಕರ್ನಾಟಕ ರಾಜ್ಯ ಪೊಲೀಸ್​ ಸದಾ ನಿಮ್ಮ ಸೇವೆಯಲ್ಲಿರುತ್ತಾರೆ ಎಂದು ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *