ಪುತ್ತೂರಿನಲ್ಲಿ 33ನೇ ವರ್ಷದ ಮೀಲಾದ್ ಸಮಾವೇಶ ಹಾಗೂ ನಾತೇ ಶರೀಫ್

ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ತಾಲೂಕು ಈದ್ ಮಿಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ)ಅವರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ 33ನೇ ವರ್ಷದ ಮೀಲಾದ್ ಸಮಾವೇಶ ಹಾಗೂ ನಾತೇ ಶರೀಫ್ ಕಾರ್ಯಕ್ರಮ ಸೆ.5ರಂದು ಸಂಜೆ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಯುವಜನ ಪರಿಷತ್ ಅಧ್ಯಕ್ಷ ಅಶ್ರಫ್ ಹಾಜಿ ಕಲ್ಲೇಗ ತಿಳಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಮಾವೇಶದ ಸಭಾ ಕಾರ್ಯಕ್ರಮಕ್ಕೆ ಮೊದಲು ನಗರದ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ಕಿಲ್ಲೆ ಮೈದಾನದ ತನಕ ಕಾಲ್ನಡಿಗೆ ಜಾಥಾ ನಡೆಯಲಿದೆ. ಜಾಥಾದಲ್ಲಿ ವಿವಿಧ ತಂಡಗಳಿಂದ ದಫ್ ಹಾಗೂ ಇಸ್ಲಾಮಿಕ್ ಕಲಾ ಸಾಹಿತ್ಯ ಪ್ರದರ್ಶನ ಹಮ್ಮಿಕೊಳ್ಳಲಾಗಿದೆ. ಜಾಥಾವನ್ನು ಉದ್ಯಮಿ ಖಲಂದರ್ ಈಸ್ಟರ್ನ್ ಉದ್ಘಾಟಿಸಲಿದ್ದಾರೆ. ಉದ್ಯಮಿ ಜುನೈದ್ ಬಿಜಿ ಧ್ವಜ ಸ್ವೀಕಾರ ಮಾಡಲಿದ್ದಾರೆ. ಆಸಿಫ್ ಪರ್ಲಡ್ಕ ಮತ್ತು ಹಾಜಿ ರಫೀಕ್ ಧ್ವಜಾರೋಹಣ ನೆರವೇರಿಸಲಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ಜುಮ್ಮಾ ಮಸೀದಿ ಮುದರ್ರಿಸ್ ಅಸ್ಸಯ್ಯದ್ ಅಹ್ಮದ್ ಪೂಕೋಯ ತಂಙಳ್ ದುವಾಶೀರ್ವಚನ ನೀಡಲಿದ್ದಾರೆ. ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ. ಅಬ್ದುಲ್ ಬಶೀರ್ ವಿಕೆ ಅಧ್ಯಕ್ಷತೆ ವಹಿಸಲಿದ್ದಾರೆ. ಎಂ.ಕೆ. ಸಿನಾನ್ ಸಖಾಫಿ ಅಜಿಲಮೊಗರು ಉದ್ಘಾಟಿಸಲಿದ್ದಾರೆ. ಸೈಯದ್ ಅಲಿ ಮನ್ನಾನಿ ಪ್ರಭಾಷಣ ಮಾಡಲಿದ್ದಾರೆ. ಈ ಸಂದರ್ಭದಲ್ಲಿ ಹಿರಿಯರಾದ ಹಾಜಿ ಪಿ.ಎ. ಉಸ್ಮಾನ್ ಚೆನ್ನಾರ್ ಸಂಪ್ಯ, ಹಾಜಿ ಎಲ್.ಟಿ. ಅಬ್ದುಲ್ ರಝಾಕ್ ಮತ್ತು ಹಾಜಿ ಇಬ್ರಾಹಿಂ ಸಾಗರ್ ಅವರನ್ನು ಸನ್ಮಾನಿಸಿ ಗೌರವಿಸಲಾಗುವುದು.

ಈದ್ ಮೀಲಾದ್ ಕಾರ್ಯಕ್ರಮದ ಹಿನ್ನಲೆಯಲ್ಲಿ ಸೆ.3ರಂದು ಬೆಳಗ್ಗೆ ಪುತ್ತೂರಿನ ರೋಟರಿ ಕ್ಯಾಂಪ್ಕೋ ಬ್ಲಡ್ ಬ್ಯಾಂಕ್‍ನ ಸಹಭಾಗಿತ್ವದಲ್ಲಿ ಮುರ ಎಂಪಿಎಂ ವಿದ್ಯಾಲಯ ಸಭಾಂಗಣದಲ್ಲಿ ರಕ್ತದಾನ ಮತ್ತು ರಕ್ತ ವರ್ಗೀಕರಣ ಶಿಬಿರ ನಡೆಯಲಿದೆ.ಸೆ.4ರಂದು ಬೆಳಗ್ಗೆ ಪುತ್ತೂರಿನ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿನ ಒಳರೋಗಿಗಳಿಗೆ ಹಣ್ಣು ಹಂಪಲು ವಿತರಣಾ ಕಾರ್ಯಕ್ರಮ ನಡೆಯಲಿದೆ ಎಂದು ಅವರು ತಿಳಿಸಿದರು.

ಸುದ್ಧಿಗೋಷ್ಟಿಯಲ್ಲಿ ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ರಾಜ್ಯ ಸಂಚಾಲಕ ನ್ಯಾಯವಾದಿ ಎಂ.ಪಿ. ಅಬೂಬಕ್ಕರ್, ಪ್ರಧಾನ ಕಾರ್ಯದರ್ಶಿ ನೌಶಾದ್ ಹಾಜಿ ಬೊಳುವಾರು, ಕಾರ್ಯದರ್ಶಿ ಬಶೀರ್ ಪರ್ಲಡ್ಕ, ಈದ್ ಮಿಲಾದ್ ಸಮಿತಿ ಅಧ್ಯಕ್ಷ ಅಶ್ರಫ್ ಬಾವು, ಕೋಶಾಧಿಕಾರಿ ಹನೀಫ್ ಬಗ್ಗುಮೂಲೆ ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.