ಮಂಗಳೂರಿನಲ್ಲಿ ಕಾಲೇಜ್ ಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ

ಸುರತ್ಕಲ್: ಕಾಲೇಜ್ ಗೆಂದು ಹೋದ ವಿದ್ಯಾರ್ಥಿ ನಾಪತ್ತೆಯಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಾಪತ್ತೆಯಾದ ವಿದ್ಯಾರ್ಥಿನಿಯನ್ನು ಕಾಟಿಪಳ್ಳ ಗ್ರಾಮದ ಗಣೇಶಕಟ್ಟೆನಿವಾಸಿ ಪ್ರಜ್ಞಾ(18) ಎಂದು ಗುರುತಿಸಲಾಗಿದೆಪ್ರಜ್ಞಾ ಅವರು ಮಂಗಳೂರಿನ ಅಲೋಶಿಯಸ್ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿ.ಸಿ.ಎ. ವ್ಯಾಸಂಗ ಮಾಡುತ್ತಿದ್ದು, ಸೆ.1 ರಂದು ಕಾಲೇಜು ಸಮವಸ್ತ್ರ ಧರಿಸಿ ಕಾಲೇಜಿಗೆ ಹೋಗುವುದಾಗಿ ತಾಯಿಯಲ್ಲಿ ತಿಳಿಸಿ ಹೋದವರು ಮನೆಗೆ ಬಾರದೆ ಕಾಣೆಯಾಗಿದ್ದಾರೆ.

ಕಾಣೆಯಾದವರ ಗುರುತು ಪತ್ತೆಯಾದಲ್ಲಿ ಸುರತ್ಕಲ್ ಪೊಲೀಸ್ ಠಾಣೆ ಸಂಪರ್ಕಿಸುವಂತೆ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

News Editor

Learn More →

Leave a Reply

Your email address will not be published. Required fields are marked *